Breaking News

ಓವರ್ ಟೇಕ್ ಮಾಡಲು ಹೋಗಿ ಚಾಲಕನ ನಿಯಂತ್ರಣ ತಪ್ಪಿ ಸೇತುವೆಯಿಂದ ಕೆಳಗೆ ಬಿದ್ದು 6 ಮಂದಿ ಸಾವನ್ನಪ್ಪಿರುವ ಘಟನೆ

Spread the love

ಶಿಮ್ಲಾ: ವಾಹನವೊಂದು ಓವರ್ ಟೇಕ್ ಮಾಡಲು ಹೋಗಿ ಚಾಲಕನ ನಿಯಂತ್ರಣ ತಪ್ಪಿ ಸೇತುವೆಯಿಂದ ಕೆಳಗೆ ಬಿದ್ದು 6 ಮಂದಿ ಸಾವನ್ನಪ್ಪಿರುವ ಘಟನೆ ಹಿಮಾಚಲ ಪ್ರದೇಶದ ಮಂಡಿ ಜಿಲ್ಲೆಯಲ್ಲಿ ನಡೆದಿದೆ.

ಈ ಅವಘಡದಲ್ಲಿ 7 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಹತ್ತಿರದ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಅಪಘಾತಕ್ಕೆ ಕಾರಣವೇನು?
ವಾಹನ ಓವರ್ ಟೇಕ್ ಮಾಡುವ ವೇಳೆ ಚಾಲಕನ ನಿಯಂತ್ರಣ ತಪ್ಪಿ ಸುಕೇತಿ ಖುದ್ ನದಿಗೆ ಬಿದ್ದು ಈ ಅಪಘಾತ ಸಂಭವಿಸಿದೆ. 7 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಇಬ್ಬರು ಗಾಯಗೊಂಡಿರುವವರನ್ನು ಹತ್ತಿರದ ಆಸ್ಪತ್ರೆಗೆ ಕರೆದೊಯ್ಯಲಾಗಿದೆ ಎಂದು  ಪೊಲೀಸ್  ಅಧಿಕಾರಿ ತಿಳಿಸಿದ್ದಾರೆ.

ಐಪಿಸಿ ಸೆಕ್ಷನ್ 279 (ರ್ಯಾಶ್ ಡ್ರೈವಿಂಗ್), ಸೆಕ್ಷನ್ 338 (ಯಾವುದೇ ವ್ಯಕ್ತಿಗೆ ತೀವ್ರ ನೋವನ್ನುಂಟು ಮಾಡುತ್ತಾರೆ) ಮತ್ತು ಸೆಕ್ಷನ್ 304 ಎ (ನಿರ್ಲಕ್ಷ್ಯದಿಂದ ಸಾವಿಗೆ ಕಾರಣವಾಗಿದ್ದಾರೆ) ಅಡಿಯಲ್ಲಿ ವಾಹನ ಚಾಲಕನ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

ರಸ್ತೆ ಅಪಘಾತದಲ್ಲಿ ಪ್ರಾಣಹಾನಿ ಸಂಭವಿಸಿರುವ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಟ್ವೀಟ್ ಮಾಡಿದ್ದಾರೆ. ಸರ್ಕಾರವು ರಕ್ಷಣೆ ಮತ್ತು ಪರಿಹಾರ ಕಾರ್ಯಗಳನ್ನು ಕೈಗೊಳ್ಳುತ್ತದೆ. ಗಾಯಾಳುಗಳು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ತಿಳಿಸಿದ್ದಾರೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ