Breaking News

ಬಾಲ್ಯವಿವಾಹದಿಂದ ಐವರು ಬಾಲಕಿಯರ ರಕ್ಷಣೆ

Spread the love

ಕೊಪ್ಪಳ: ತಾಲ್ಲೂಕಿನ ಜಿನ್ನಾಪುರ ತಾಂಡದ ದೇವಸ್ಥಾನದಲ್ಲಿ ನಿಗದಿಯಾಗಿದ್ದ ಐದು ಜನ ಬಾಲಕಿಯರ ಬಾಲ್ಯ ವಿವಾಹವನ್ನು ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಅಧಿಕಾರಿಗಳು ತಡೆದಿದ್ದಾರೆ.

ಅವರ ಪೋಷಣೆ ಮತ್ತು ರಕ್ಷಣೆಗಾಗಿ ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿಗೆ ಹಾಜರುಪಡಿಸಲಾಗಿದೆ.

ಏ. 4ರಂದು ಜಿನ್ನಾಪುರ ತಾಂಡಾದಲ್ಲಿ ಮರಿಯಮ್ಮದೇವಿ ದೇವಸ್ಥಾನದ ಜಾತ್ರಾ ಮಹೋತ್ಸವದಲ್ಲಿ ವಿವಾಹ ನಿಶ್ಚಯಿಸಲಾಗಿತ್ತು. ಈ ಬಗ್ಗೆ ಮಕ್ಕಳ ಸಹಾಯವಾಣಿ 1098/112 ಕರೆ ಬಂದ ಹಿನ್ನೆಲೆಯಲ್ಲಿ ಜಿನ್ನಾಪುರ ತಾಂಡಾಕ್ಕೆ ಅಂಗನವಾಡಿ ಮೇಲ್ವಿಚಾರಕಿ ಮಂಜುಳಾ, ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಪ್ರತಿಭಾ ಕಾಶಿಮಠ, ಶಿವಲೀಲಾ ವನ್ನೂರು ಮತ್ತು ಪೊಲೀಸರು ಸ್ಥಳಕ್ಕೆ ತೆರಳಿ ದಾಖಲೆಗಳನ್ನು ಪರಿಶೀಲಿಸಿದಾಗ ಘಟನೆ ಬೆಳಕಿಗೆ ಬಂದಿದೆ.


Spread the love

About Laxminews 24x7

Check Also

ಅಜ್ಜಿ ತಿಥಿ ಕಾರ್ಯಕ್ಕೆ ಹೋಗಿದ್ದವರ ಮನೆಯಲ್ಲಿ ಕಳ್ಳತನ

Spread the loveಆನೇಕಲ್, ಜೂನ್​ 15: ಅಜ್ಜಿಯ ತಿಥಿ ಕಾರ್ಯಕ್ಕೆ ಹೋದವರಿಗೆ ಕಳ್ಳರು ಶಾಕ್ ನೀಡಿದ್ದಾರೆ. ಅತ್ತ ಹಳೆ ಮನೆಯಲ್ಲಿ ಮನೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ