ವಿಜಯಪುರ : ಸಾಲಬಾಧೆಯಿಂದ ಮನನೊಂದು ರೈತರೊಬ್ಬರು ಬಸ್ ನಿಲ್ದಾಣದಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಬಸವನಬಾಗೇವಾಡಿ ತಾಲೂಕಿನ ಹೂವಿನಹಿಪ್ಪರಗಿ ಬಸ್ ನಿಲ್ದಾಣದಲ್ಲಿ ನಡೆದಿದೆ.
ನೇಣಿಗೆ ಶರಣಾದ ರೈತರನ್ನು ಭೀಮಪ್ಪ ಡೋಣೂರ (76) ಎಂದು ಗುರುತಿಸಲಾಗಿದೆ.ಬಸವನಬಾಗೇಬಾಡಿ ತಾಲೂಕಿನ ಹುಣಸ್ಯಾಳ ಗ್ರಾಮದ ರೈತ ಭೀಮಪ್ಪ ಹೂವಿನಹಿಪ್ಪರಗಿ ಬಸ್ ನಿಲ್ದಾಣದ ಆವರಣದಲ್ಲಿ ಕಬ್ಜಿಣದ ಸರಳಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಖಾಸಗಿಯಾಗಿ ಲಕ್ಷಾಂತರ ರೂ. ಸಾಲ ಮಾಡಿಕೊಂಡಿದ್ದ ಭೀಮಪ್ಪ ಸಾಲ ಮರುಪಾವತಿ ಮಾಡಲಾಗದೇ ನೊಂದಿದ್ದ. ಇದರಿಂದಾಗಿ ಖಿನ್ನತೆಗೆ ಒಳಗಾಗಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಕುಟುಂಬದವರು ಹೇಳಿದ್ದಾರೆ.ಸುದ್ದಿ ತಿಳಿದು ಸ್ಥಳಕ್ಕೆ ಧಾವಿಸಿರುವ ಬಸವನಬಾಗೇಬಾಡಿ ಪೊಲೀಸರು ಪರಿಶೀಲನೆ ನಡೆಸಿದ್ದಾರೆ.
Laxmi News 24×7