Home / ರಾಜಕೀಯ / BSY ವಿರುದ್ಧದ ಪೋಕ್ಸೊ ಪ್ರಕರಣ ತನಿಖೆ ಸಿಬಿಐಗೆ ವಹಿಸಲು ಹೈಕೋರ್ಟ್ ಸಿಜೆಗೆ ಮನವಿ

BSY ವಿರುದ್ಧದ ಪೋಕ್ಸೊ ಪ್ರಕರಣ ತನಿಖೆ ಸಿಬಿಐಗೆ ವಹಿಸಲು ಹೈಕೋರ್ಟ್ ಸಿಜೆಗೆ ಮನವಿ

Spread the love

ಬೆಂಗಳೂರು: ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ವಿರುದ್ಧದ ಪೋಕ್ಸೊ ಪ್ರಕರಣದ ತನಿಖೆಯನ್ನು ಸಿಐಡಿ ಪಾರದರ್ಶಕವಾಗಿ ನಡೆಸುತ್ತಿಲ್ಲ ಎಂದು ಸಂತ್ರಸ್ತೆಯ ತಾಯಿ ಗಂಭೀರ ಆರೋಪ ಮಾಡಿದ್ದು, ಸಿಬಿಐ ತನಿಖೆಗೆ ವಹಿಸುವಂತೆ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗೆ ಮನವಿ ಮಾಡಿದ್ದಾರೆ.

ಅವರ ಮನವಿಯನ್ನು ಮಂಗಳವಾರ ಹೈಕೋರ್ಟ್ ಸ್ವೀಕರಿಸಿದೆ. ಪ್ರಕರಣದ ತನಿಖೆ ನಡೆಸುತ್ತಿರುವ ಸಿಐಡಿ ತನಿಖಾಧಿಕಾರಿಗಳು ಪ್ರಕ್ರಿಯೆ ಅನುಸರಿಸದೇ ವಿಳಂಬ ಮಾಡುತ್ತಿದ್ದಾರೆ. ಕೇಸ್ ಗೆ ಸಂಬಂಧಪಡದ ವ್ಯಕ್ತಿಗಳನ್ನು ಅನಗತ್ಯವಾಗಿ ಕರೆಸಿ ವಿಚಾರಣೆ ನಡೆಸಿ ಕಾಲಹರಣ ಮಾಡುತ್ತಿದ್ದಾರೆ. ಪ್ರಭಾವಿ ಆರೋಪಿ ರಕ್ಷಣೆಗೆ ಬೇಕಾದ ತಂತ್ರಗಳನ್ನು ಅನುಸರಿಸುತ್ತಿದ್ದಾರೆ ಎಂದು ಸಂತ್ರಸ್ತೆ ತಾಯಿ ಆರೋಪಿಸಿದ್ದಾರೆ.

ನ್ಯಾಯಕ್ಕಾಗಿ ಹೋರಾಡುತ್ತಿರುವ ನನಗೆ ರಾಜ್ಯ ಸರ್ಕಾರ, ಸಿಐಡಿ ಮೇಲೆ ನಂಬಿಕೆ ಇಲ್ಲ. ಹೀಗಾಗಿ ತನಿಖೆಯನ್ನು ಸಿಬಿಐಗೆ ವಹಿಸಿ ನಿವೃತ್ತ ನ್ಯಾಯಮೂರ್ತಿಯೊಬ್ಬರ ಮೇಲ್ವಿಚಾರಣೆಗೆ ವಹಿಸಬೇಕು ಎಂದು ಕೋರಿದ್ದಾರೆ.


Spread the love

About Laxminews 24x7

Check Also

ಜನರು ತಿಂಗಳುಗಟ್ಟಲೆ ಓಡಾಡಿದರು ವೀಸಾ ಸಿಗಲ್ಲ, ಪ್ರಜ್ವಲ್ ಗೆ ಒಂದೇ ದಿನದಲ್ಲಿ ಹೇಗೆ ಸಿಕ್ಕಿತು? : ವಿನಯ್ ಕುಲಕರ್ಣಿ

Spread the loveಹಾವೇರಿ : ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾವೇರಿಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ