ನವದೆಹಲಿ : ಲೋಕಸಭೆ ಚುನಾವಣೆಗೆ ತಮ್ಮ ಮಗನಿಗೆ ಟಿಕೆಟ್ ಕೈತಪ್ಪಿರುವ ಹಿನ್ನೆಲೆಯಲ್ಲಿ ಬಂಡಾಯವೆದ್ದಿರುವ ಬಿಜೆಪಿಯ ಮಾಜಿ ಸಚಿವ ಕೆ ಎಸ್ ಈಶ್ವರಪ್ಪ ಪಕ್ಷೇತರವಾಗಿ ಸ್ಪರ್ಧಿಸಲು ನಿರ್ಧರಿಸಿದ್ದಾರೆ.
ಈ ಹಿನ್ನೆಲೆಯಲ್ಲಿ ಅವರು ನಿನ್ನೆ ಕೇಂದ್ರ ಸಚಿವ ಅಮಿತ್ ಶಾ ಅವರನ್ನು ಭೇಟಿಯಾಗಲು ದೆಹಲಿಗೆ ತೆರಳಿದರು.ಆದರೆ ಅಮಿತ್ ಶಾ ಅವರು ಈಶ್ವರಪ್ಪ ಅವರ ಭೇಟಿಯನ್ನು ನಿರಾಕರಿಸಿದ ಹಿನ್ನೆಲೆಯಲ್ಲಿ ಇದೀಗ ಅವರು ವಾಪಸ್ ಆಗಿದ್ದಾರೆ.
ಅಮಿತ್ ಶಾ ಬೇಟಿಗೆ ಸಮಯ ಸಿಗದ ಕಾರಣ ಇದೀಗ ಈಶ್ವರಪ್ಪ ದೆಹಲಿಯಿಂದ ಬೆಂಗಳೂರಿಗೆ ವಾಪಸ್ ಆಗುತ್ತಿದ್ದಾರೆ. ಬೆಳಗ್ಗೆ 6 10ರ ಫ್ಲೈಟ್ ಗೆ ಕೆ ಎಸ್ ಈಶ್ವರಪ್ಪ ಪ್ರಯಾಣ ಬೆಳೆಸಿದ್ದಾರೆ ಎಂದು ತಿಳಿದುಬಂದಿದೆ.
ಇವಳೆ ಸುದ್ದಿಗಾರನಿಗೆ ಮಾತನಾಡಿದ ಅವರು ಲೋಕಸಭಾ ಚುನಾವಣೆಯಲ್ಲಿ ಬಿ ವೈ ರಾಘವೇಂದ್ರ ಸೋಲಲಿ ಎಂಬ ಪರೀಕ್ಷೆ ಅಮಿತ್ ಶಾ ಅವರಿಗೆ ಇರಬಹುದು ಎಂದು ತಿಳಿಸಿದರು.