ಬೆಂಗಳೂರು : ರಾಜ್ಯದಲ್ಲಿ ಭಾರೀ ಕುತೂಹಲ ಮೂಡಿಸಿರುವ ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿ ಡಾ.ಸಿ.ಎನ್. ಮಂಜುನಾಥ್ ಅವರು ಇಂದು ನಾಮಪತ್ರ ಸಲ್ಲಿಸಲಿದ್ದಾರೆ.
ಇಂದು ಮೈತ್ರಿ ಅಭ್ಯರ್ಥಿ ಡಾ.ಸಿ.ಎನ್. ಮಂಜುನಾಥ್ ಅವರು ನಾಮಪತ್ರ ಸಲ್ಲಿಸಲಿದ್ದು, ಇದಕ್ಕೂ ಮುನ್ನ ದಿನ ಬುಧವಾರ ಮಂಜುನಾಥ್ ಹೆಸರಿನಲ್ಲಿ ಒಟ್ಟು 4 ಮಂದಿ ನಾಮಪತ್ರ ಸಲ್ಲಿಸಿದ್ದಾರೆ.

ಬಹುಜನ್ ಭಾರತ ಪಕ್ಷದ ಅಭ್ಯರ್ಥಿ ಮಂಜುನಾಥ್ ಸಿ.ಎನ್., ಸ್ವಾತಂತ್ರತ್ರ್ಯ ಅಭ್ಯರ್ಥಿಗಳಾಗಿ ಮಂಜುನಾಥ್ ಎನ್, ಮಂಜುನಾಥ್ ಸಿ, ಸ್ವಾತಂತ್ರತ್ರ್ಯ ಅಭ್ಯರ್ಥಿಯಾಗಿ ಮಂಜುನಾಥ್ ಎನ್. ಎಂಬುವವರು ಬುಧವಾರ ನಾಮಪತ್ರ ಸಲ್ಲಿಸಿದ್ದಾರೆ.
ಮಂಜುನಾಥ್ ಹೆಸರಿನಲ್ಲಿ ನಾಲ್ಕು ಮಂದಿ ನಾಮಪತ್ರ ಸಲ್ಲಿಸಿದ್ದಾರೆ. ಕೊನೆಯ ದಿನವಾದ ಗುರುವಾರ ಇದೇ ಹೆಸರಿನಲ್ಲಿ ಇನ್ನು ಹಲವರು ನಾಮಪತ್ರ ಸಲ್ಲಿಸುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ.
Laxmi News 24×7