Breaking News

ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಮಂಜುನಾಥ್‌ ಎಂಬ 4 ಜನ ನಾಮಪತ್ರ ಸಲ್ಲಿಕೆ!

Spread the love

ಬೆಂಗಳೂರು : ರಾಜ್ಯದಲ್ಲಿ ಭಾರೀ ಕುತೂಹಲ ಮೂಡಿಸಿರುವ ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿ ಡಾ.ಸಿ.ಎನ್. ಮಂಜುನಾಥ್ ಅವರು ಇಂದು ನಾಮಪತ್ರ ಸಲ್ಲಿಸಲಿದ್ದಾರೆ.

ಇಂದು ಮೈತ್ರಿ ಅಭ್ಯರ್ಥಿ ಡಾ.ಸಿ.ಎನ್‌. ಮಂಜುನಾಥ್‌ ಅವರು ನಾಮಪತ್ರ ಸಲ್ಲಿಸಲಿದ್ದು, ಇದಕ್ಕೂ ಮುನ್ನ ದಿನ ಬುಧವಾರ ಮಂಜುನಾಥ್‌ ಹೆಸರಿನಲ್ಲಿ ಒಟ್ಟು 4 ಮಂದಿ ನಾಮಪತ್ರ ಸಲ್ಲಿಸಿದ್ದಾರೆ.

ಡಾ.ಸಿ.ಎನ್‌ ಮಂಜುನಾಥ್‌ ಗೆ ಬಿಗ್ ಶಾಕ್ : ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಮಂಜುನಾಥ್‌ ಎಂಬ 4 ಜನ ನಾಮಪತ್ರ ಸಲ್ಲಿಕೆ!

ಬಹುಜನ್‌ ಭಾರತ ಪಕ್ಷದ ಅಭ್ಯರ್ಥಿ ಮಂಜುನಾಥ್‌ ಸಿ.ಎನ್‌., ಸ್ವಾತಂತ್ರತ್ರ್ಯ ಅಭ್ಯರ್ಥಿಗಳಾಗಿ ಮಂಜುನಾಥ್‌ ಎನ್‌, ಮಂಜುನಾಥ್‌ ಸಿ, ಸ್ವಾತಂತ್ರತ್ರ್ಯ ಅಭ್ಯರ್ಥಿಯಾಗಿ ಮಂಜುನಾಥ್‌ ಎನ್‌. ಎಂಬುವವರು ಬುಧವಾರ ನಾಮಪತ್ರ ಸಲ್ಲಿಸಿದ್ದಾರೆ.

ಮಂಜುನಾಥ್‌ ಹೆಸರಿನಲ್ಲಿ ನಾಲ್ಕು ಮಂದಿ ನಾಮಪತ್ರ ಸಲ್ಲಿಸಿದ್ದಾರೆ. ಕೊನೆಯ ದಿನವಾದ ಗುರುವಾರ ಇದೇ ಹೆಸರಿನಲ್ಲಿ ಇನ್ನು ಹಲವರು ನಾಮಪತ್ರ ಸಲ್ಲಿಸುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ.


Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ