Breaking News

ನಿಮ್ಮ ಕ್ಷೇತ್ರಗಳಿಗೆ ನಿತ್ಯವೂ ಹೋಗಿ: ಎಎಪಿ ಶಾಸಕರಿಗೆ ಕೇಜ್ರಿವಾಲ್ ಸಂದೇಶ

Spread the love

ವದೆಹಲಿ: ತಿಹಾರ್‌ ಜೈಲಿನಲ್ಲಿರುವ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್‌ ಅವರು, ‘ಪ್ರತಿ ದಿನವೂ ನಿಮ್ಮ ವಿಧಾನಸಭೆ ಕ್ಷೇತ್ರಗಳಿಗೆ ಭೇಟಿ ನೀಡಿ. ಜನರಿಗೆ ಯಾವ ಸಮಸ್ಯೆಯೂ ಇಲ್ಲ ಎಂಬುದನ್ನು ಖಚಿತಪಡಿಸಿಕೊಳ್ಳಿ’ ಎಂದು ಆಮ್‌ ಆದ್ಮಿ ಪಕ್ಷದ (ಎಎಪಿ) ಶಾಸಕರಿಗೆ ಕರೆ ನೀಡಿದ್ದಾರೆ.

ಎಎಪಿ ರಾಷ್ಟ್ರೀಯ ಸಂಚಾಲಕರೂ ಆಗಿರುವ ಅರವಿಂದ ಕೇಜ್ರಿವಾಲ್‌ ನೀಡಿರುವ ಸಂದೇಶವನ್ನು ಅವರ ಪತ್ನಿ ಸುನೀತಾ ಕೇಜ್ರಿವಾಲ್ ಗುರುವಾರ ಹಂಚಿಕೊಂಡಿದ್ದಾರೆ.

ತಾವು ಜೈಲಿನಲ್ಲಿದ್ದರೂ, ತಮ್ಮ ಕುಟುಂಬದಂತಿರುವ ದೆಹಲಿಯ 2 ಕೋಟಿ ಜನರಿಗೆ ಸಮಸ್ಯೆ ಆಗಬಾರದು ಎಂಬುದೇ ಅವರ ಬಯಕೆಯಾಗಿದೆ ಎಂದು ಸುನೀತಾ ಹೇಳಿದ್ದಾರೆ.

‘ಅಧಿಕೃತ ಕರ್ತವ್ಯಗಳ ಹೊರತಾಗಿಯೂ ನಾವು ಜನರ ಸಮಸ್ಯೆಗಳನ್ನು ಪರಿಹರಿಸಬೇಕಿದೆ’ ಎಂದು ಸಿಎಂ ಹೇಳಿರುವುದಾಗಿ ತಿಳಿಸಿದ್ದಾರೆ.

ದೆಹಲಿ ಸರ್ಕಾರ ಸದ್ಯ ಹಿಂಪಡೆದಿರುವ ‘ಅಬಕಾರಿ ನೀತಿ’ ಜಾರಿ ವೇಳೆ ನಡೆದಿದೆ ಎನ್ನಲಾದ ಹಣ ಅಕ್ರಮ ವರ್ಗಾವಣೆ ಸಂಬಂಧ ಕೇಜ್ರಿವಾಲ್‌ ಅವರನ್ನು ಜಾರಿ ನಿರ್ದೇಶನಲಾಯದ ಅಧಿಕಾರಿಗಳು ಬಂಧಿಸಿದ್ದಾರೆ. ಅವರನ್ನು ಏಪ್ರಿಲ್‌ 15ರವರೆಗೆ ನ್ಯಾಯಾಂಗದ ವಶಕ್ಕೆ ನೀಡಲಾಗಿದೆ.


Spread the love

About Laxminews 24x7

Check Also

ಜನರಲ್ಲಿ ವೈಚಾರಿಕತೆ, ವೈಜ್ಞಾನಿಕತೆ ಬೆಳೆಯದಿದ್ದರೆ, ಕೇವಲ ಮೌಢ್ಯ ನಿಷೇಧ ಕಾನೂನಿನ ಮೂಲಕ ನಿರೀಕ್ಷಿತ ಬದಲಾವಣೆ ಸಾಧ್ಯವಿಲ್ಲ ಎಂದ ಸಿಎಂ

Spread the loveಬೆಂಗಳೂರು: ”ದ್ವಿಭಾಷಾ ಸೂತ್ರ ನನ್ನ ಅಭಿಪ್ರಾಯವಾಗಿದೆ. ಅದನ್ನು ಸರ್ಕಾರದ ಅಭಿಪ್ರಾಯ ಮಾಡುವ ದಿಕ್ಕಿನಲ್ಲಿ ಪ್ರಯತ್ನಿಸುತ್ತೇನೆ” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ