Breaking News

ಆಸ್ಪತ್ರೆಗೆ ದಾಖಲಾದ ನಟ ದರ್ಶನ್

Spread the love

Actor Darshan : ಸ್ಯಾಂಡಲ್‌ವುಡ್‌ ಚಾಲೆಜಿಂಗ್ ಸ್ಟಾರ್ ದರ್ಶನ್ ಅವರು ಆಸ್ಪತ್ರೆಗೆ ದಾಖಲಾಗಿದ್ದು, ಇಂದು ಅವರ ಕೈಗೆ ಶಸ್ತ್ರ ಚಿಕಿತ್ಸೆ ನಡೆಯಲಿದೆ ಎಂದು ತಿಳಿದು ಬಂದಿದೆ. ಇನ್ನು ಡಿಬಾಸ್‌ ಆದಷ್ಟು ಬೇಗ ಗುಣಮುಖರಾಗಲಿ ಅಂತ ಅವರ ಅಭಿಮಾನಿಗಳು ದೇವರಲ್ಲಿ ಪ್ರಾರ್ಥನೆ ಮಾಡುತ್ತಿದ್ದಾರೆ.

 

ಹೌದು..ʼಡೆವಿಲ್ʼದಚ್ಚು ನಟನೆಯ ಮುಂಬರುವ ಬಹುನಿರೀಕ್ಷಿತ ಸಿನಿಮಾ. ಈ ಚಿತ್ರದ ಶೂಟಿಂಗ್ ವೇಳೆ ಡಿಬಾಸ್‌ ಅವರ ಕೈಗೆ ಪೆಟ್ಟಾಗಿತ್ತು. ಆದರೆ, ಅವರು, ಕೆಲವೊಂದಿಷ್ಟು ಸಿನಿಮಾ ಪ್ರಮೋಶನ್‌ ಮತ್ತು ಸಂಸದೆ ಸುಮಲತಾ ಅವರ ರಾಜಕೀಯ ಕಾರಣದಿಂದಾಗಿ ಕೈ ಆಪರೇಷನ್‌ ಅನ್ನು ಮುಂದೂಡಿದ್ದರು.

ಇಂದು ದರ್ಶನ್‌ ಅವರ ಶಸ್ತ್ರಚಿಕಿತ್ಸೆಗೆ ಒಳಗಾಗಲಿದ್ದಾರೆ. ಈ ಮಾಹಿತಿಯನ್ನು ಸ್ವತಃ ಅವರೇ ಹೇಳಿಕೊಂಡಿದ್ದಾರೆ. ಮಂಡ್ಯದಲ್ಲಿ ನಡೆದ ಸುಮಲತಾ ಅಂಬರೀಶ್ ಅವರ ಬೆಂಬಲಿಗರ ಸಭೆಯಲ್ಲಿ ಮಾತನಾಡುವಾಗ, ಅವರು ಆಸ್ಪತ್ರೆಗೆ ಅಡ್ಮಿಟ್‌ ಆಗುವುದಾಗಿ ತಿಳಿಸಿದ್ದರು.

 


Spread the love

About Laxminews 24x7

Check Also

ಏಪ್ರಿಲ್‌ಗೆ ಜಿಬಿಎ, ಸ್ಥಳೀಯ ಸಂಸ್ಥೆ ಚುನಾವಣೆ ಸಿದ್ಧತೆಗೆ ಜಿಲ್ಲಾಧಿಕಾರಿಗಳಿಗೆ ಆಯೋಗ ಸೂಚನೆ

Spread the loveಬೆಂಗಳೂರು:ಕಳೆದ ನಾಲ್ಕೈದು ವರ್ಷಗಳಿಂದ ಒಂದಿಲ್ಲೊಂದು ಕಾರಣಗಳಿಂದ ಪದೇ ಪದೇ ಮುಂದೂಡಲಾಗಿದ್ದ ಕರ್ನಾಟಕ ಸ್ಥಳೀಯ ಸಂಸ್ಥೆಗಳ ಚುನಾವಣೆಯು ಮುಂಬರುವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ