Breaking News

10ರಂದು ಮರಾಠ ಸಮಾಜದ ಶಕ್ತಿ ಪ್ರದರ್ಶನ: ಪದ್ಮಾಕರ ಪಾಟೀಲ

Spread the love

ಬೀದರ್‌: ‘ಏ.10ರಂದು ಭಾಲ್ಕಿ ಪಟ್ಟಣದಲ್ಲಿ ಮರಾಠ ಸಮಾಜದ ಶಕ್ತಿ ಪ್ರದರ್ಶನ ಹಾಗೂ ಬಹಿರಂಗ ಸಮಾವೇಶ ಹಮ್ಮಿಕೊಳ್ಳಲಾಗಿದೆ’ ಎಂದು ಸಮಾಜದ ಮುಖಂಡರೂ ಆದ ಮಾಜಿ ಜಿಲ್ಲಾ ಪಂಚಾಯಿತಿ ಅಧ್ಯಕ್ಷ ಪದ್ಮಾಕರ ಪಾಟೀಲ ತಿಳಿಸಿದರು.

ನಗರದಲ್ಲಿ ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸಕಲ ಮರಾಠ ಸಮಾಜದಿಂದ ಸಮಾವೇಶ ಹಮ್ಮಿಕೊಳ್ಳಲಾಗಿದೆ.ಅಂದಿನ ಸಮಾವೇಶದಲ್ಲಿ ಸುಮಾರು 1 ಲಕ್ಷ ಮರಾಠ ಸಮುದಾಯದವರು ಪಾಲ್ಗೊಳ್ಳುವ ನಿರೀಕ್ಷೆ ಇದೆ ಎಂದು ಹೇಳಿದರು.

ಸಮಾಜವು ಆರ್ಥಿಕ, ಶೈಕ್ಷಣಿಕವಾಗಿ ಹಿಂದುಳಿದಿದ್ದು, 2ಎ ಮೀಸಲಾತಿ ಕಲ್ಪಿಸುವುದು, ಸಮಾಜದ ಸ್ಥಿತಿಗತಿ ಕುರಿತು ಸಮಾವೇಶದಲ್ಲಿ ಚರ್ಚಿಸಲಾಗುವುದು. ಸಮಾಜದ ರಾಷ್ಟ್ರೀಯ ಮುಖಂಡ ಮನೋಜ್‌ ದಾದಾ ಪಾಟೀಲ ನೇತೃತ್ವದಲ್ಲಿ ಸಮಾವೇಶ ನಡೆಯಲಿದೆ. ಬೀದರ್‌ ಲೋಕಸಭಾ ಕ್ಷೇತ್ರದಿಂದ ಪಕ್ಷದ ಅಭ್ಯರ್ಥಿಯನ್ನು ಕಣಕ್ಕಿಳಿಸಬೇಕೋ ಅಥವಾ ಬೇಡವೋ ಎನ್ನುವುದರ ಬಗ್ಗೆ ಸಮಾವೇಶದಲ್ಲಿ ನಿರ್ಧರಿಸಿ, ಏ. 12ರಂದು ಪ್ರಕಟಿಸಲಾಗುವುದು ಎಂದು ತಿಳಿಸಿದರು.

ಮುಖಂಡ ನಾರಾಯಣ ಗಣೇಶ ಮಾತನಾಡಿ, ಲೋಕಸಭಾ ಚುನಾವಣೆಯಲ್ಲಿ ಮರಾಠರಿಗೆ ಟಿಕೆಟ್‌ ಸಿಗುವ ನಿರೀಕ್ಷೆ ಇತ್ತು. ಅದು ಹುಸಿಯಾಗಿದೆ ಎಂದರು.

ಮುಖಂಡರಾದ ವಿಜಯಕುಮಾರ ಪಾಟೀಲ, ದಿನಕರ್‌ ಮೋರೆ, ಜನಾರ್ದನ ಬಿರಾದಾರ, ಸಂತೋಷ ತೊಗರಖಡೆ, ಅಮರ ಜಾಧವ್‌, ಅಂಗದರಾವ ಜಗತಾಪ್‌, ಸುನೀಲ್‌ ಶಿಂಧೆ ಹಾಜರಿದ್ದರು.


Spread the love

About Laxminews 24x7

Check Also

ಇನ್ಮುಂದೆ ಆನ್​ಲೈನ್ ಬೆಟ್ಟಿಂಗ್ ನಿಷೇಧ:

Spread the loveಬೆಂಗಳೂರು: ಆನ್​ಲೈನ್ ಬೆಟ್ಟಿಂಗ್ ಹಾಗೂ ಗ್ಯಾಂಬ್ಲಿಂಗ್​ಗೆ ಅಂಕುಶ ಹಾಕಲು ರಾಜ್ಯ ಸರ್ಕಾರ ಹೊಸ ಮಸೂದೆಯನ್ನು ರೂಪಿಸಿದೆ.‌ ಕರ್ನಾಟಕ ಪೊಲೀಸ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ