Breaking News

ಬಿಜೆಪಿ ಸೇರುವಾಗ ಜಾಮೂನು ಕೊಡ್ತಾರೆ, ಸೇರಿದ ಮೇಲೆ ವಿಷ ಹಾಕ್ತಾರೆ : ಸೋಮಶೇಖರ್

Spread the love

ಕೆಂಗೇರಿ,- ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾಗುವ ಸಂದರ್ಭದಲ್ಲಿ ಜಾಮೂನು, ಮೈಸೂರುಪಾಕು, ಜಿಲೇಬಿ ಕೊಡುತ್ತಾರೆ. ಅವರ ಕೆಲಸ ಆದ್ಮೇಲೆ ವಿಷ ಕೊಡುತ್ತಾರೆ ಎಂದು ಯಶವಂತಪುರ ವಿಧಾನಸಭಾ ಕ್ಷೇತ್ರದ ಶಾಸಕ ಎಸ್.ಟಿ.ಸೋಮಶೇಖರ್ ಭಾವುಕರಾಗಿ ನುಡಿದರು.

ಕೆಂಗೇರಿ ಉಪನಗರದಲ್ಲಿ ಆಯೋಜಿಸಿದ್ದ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ಬಿಜೆಪಿ ನಾಯಕರು ಕದ್ದುಮುಚ್ಚಿ ರಾತ್ರಿ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ಡಿ.ಕೆ.ಶಿವಕುಮಾರ್ ಅವರ ಭೇಟಿಯಾಗುತ್ತಾರೆ.ಆದರೆ ನಾನು ಕ್ಷೇತ್ರದ ಅಭಿವೃದ್ಧಿಗಾಗಿ ರಾಜಾರೋಷವಾಗಿ ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಭೇಟಿ ಮಾಡಿದರೆ ಅದನ್ನೇ ದೊಡ್ಡದು ಮಾಡುತ್ತಾರೆ ಎಂದು ದೂರಿದರು.

ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರ ಪುಕ್ಸಟ್ಟೆ ಬಿದ್ದಿಲ್ಲ ಉಡುಪಿ ಚಿಕ್ಕಮಗಳೂರು ಕ್ಷೇತ್ರದ ಜನತೆ ಗೋ ಬ್ಯಾಕ್ ಗೋ ಬ್ಯಾಕ್ ಎಂದು ಹೇಳಿ ತಿರಸ್ಕಾರ ಮಾಡಿದವರನ್ನು ಇಲ್ಲಿ ಅಭ್ಯರ್ಥಿಯಾಗಿ ಮಾಡುತ್ತಾರೆ ಅದನ್ನು ಒಪ್ಪಬೇಕೇ ಎಂದು ಪ್ರಶ್ನಿಸಿದರು.

ರಾಜ್ಯಸಭೆಯಲ್ಲಿ ಅಡ್ಡ ಮತದಾನದ ವಿಚಾರವನ್ನು ದೊಡ್ಡದು ಮಾಡಿ ಬೀದಿಯಲ್ಲಿ ಪ್ರತಿಭಟನೆ ನಡೆಸಿ ನನ್ನ ಸ್ವಾಭಿಮಾನಕ್ಕೆ ಧಕ್ಕೆ ಮಾಡಿದವರೊಂದಿಗೆ ನಾನು ಹೇಗೆ ಹೋಗಲಿ ಎಂದರು.ನಾನು ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡಿದ್ದು ನಾನು ಮಾಡಿದ ಬಹುದೊಡ್ಡ ತಪ್ಪು ಎಂದು ಇಂದು ಅನಿಸುತ್ತಿದೆ ಎಂದು ಹೇಳಿದರು.


Spread the love

About Laxminews 24x7

Check Also

ಏಪ್ರಿಲ್‌ಗೆ ಜಿಬಿಎ, ಸ್ಥಳೀಯ ಸಂಸ್ಥೆ ಚುನಾವಣೆ ಸಿದ್ಧತೆಗೆ ಜಿಲ್ಲಾಧಿಕಾರಿಗಳಿಗೆ ಆಯೋಗ ಸೂಚನೆ

Spread the loveಬೆಂಗಳೂರು:ಕಳೆದ ನಾಲ್ಕೈದು ವರ್ಷಗಳಿಂದ ಒಂದಿಲ್ಲೊಂದು ಕಾರಣಗಳಿಂದ ಪದೇ ಪದೇ ಮುಂದೂಡಲಾಗಿದ್ದ ಕರ್ನಾಟಕ ಸ್ಥಳೀಯ ಸಂಸ್ಥೆಗಳ ಚುನಾವಣೆಯು ಮುಂಬರುವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ