Breaking News

ಗೋಕರ್ಣಕ್ಕೆ ಹೊರಟಿದ್ದ ಬಸ್ ಪಲ್ಟಿ: ಮೂವರು ಸ್ಥಳದಲ್ಲೇ ಮೃತ್ಯು, 38 ಮಂದಿಗೆ ಗಾಯ

Spread the love

ಹೊಳಲ್ಕೆರೆ: ಬೆಂಗಳೂರಿನಿಂದ ಗೋಕರ್ಣಕ್ಕೆ ಹೊರಟಿದ್ದ ಖಾಸಗಿ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಪರಿಣಾಮ ಮೂವರು ಪ್ರಯಾಣಿಕರು ಸ್ಥಳದಲ್ಲೇ ಮೃತಪಟ್ಟು 38 ಮಂದಿ ಗಾಯಗೊಂಡಿರುವ ಘಟನೆ ಹೊಳಲ್ಕೆರೆ ತಾಲ್ಲೂಕಿನ ಕಣಿವೆ ಆಂಜನೇಯ ದೇವಸ್ಥಾನದ ಬಳಿ ಭಾನುವಾರ ಮುಂಜಾನೆ ಸಂಭವಿಸಿದೆ.

ಬೆಂಗಳೂರಿನಿಂದ ಹೊರಟ ಬಸ್ಸಿನಲ್ಲಿ 50 ಜನ ಪ್ರಯಾಣಿಕರಿದ್ದರು ಎನ್ನಲಾಗಿದೆ ಅವೈಜ್ಞಾನಿಕ ಹೆದ್ದಾರಿ ಕಾಮಗಾರಿಯಿಂದ ರಸ್ತೆ ಅವಘಡ ಸಂಭವಿಸಿದೆ ಎಂದು ಹೇಳಲಾಗಿದೆ.

ಭಾನುವಾರ ಮುಂಜಾನೆ ನಾಲ್ಕು ಗಂಟೆಗೆ ಅಪಘಾತ ಸಂಭವಿಸಿದ್ದು ಘಟನೆಯಲ್ಲಿ ಮೂವರು ಸ್ಥಳದಲ್ಲೇ ಮೃತಪಟ್ಟರೆ ಮೂವತ್ತೆಂಟು ಮಂದಿ ಗಾಯಗೊಂಡಿದ್ದಾರೆ ಗಾಯಾಳುಗಳಿಗೆ ಹೊಳಲ್ಕೆರೆ ತಾಲ್ಲೂಕಿನ ಸರಕಾರಿ ಅಸ್ವತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಹೊಳಲ್ಕೆರೆ ತಾಲ್ಲೂಕಿನ ಸರಕಾರಿ ಆಸ್ಪತ್ರೆಯಲ್ಲಿ ವೈದ್ಯಾಧಿಕಾರಿ ಡಾಕ್ಟರ್ ವಿನೋದ್ ಸಜ್ಜನ್ ನೇತ್ರದಲ್ಲಿ ಗಾಯಗಳುಗಳಿಗೆ ತ್ವರಿತ ಗತಿಯಲ್ಲಿ ಚಿಕಿತ್ಸೆ.

ಹೊಳಲ್ಕೆರೆ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲು.


Spread the love

About Laxminews 24x7

Check Also

ಏಪ್ರಿಲ್‌ಗೆ ಜಿಬಿಎ, ಸ್ಥಳೀಯ ಸಂಸ್ಥೆ ಚುನಾವಣೆ ಸಿದ್ಧತೆಗೆ ಜಿಲ್ಲಾಧಿಕಾರಿಗಳಿಗೆ ಆಯೋಗ ಸೂಚನೆ

Spread the loveಬೆಂಗಳೂರು:ಕಳೆದ ನಾಲ್ಕೈದು ವರ್ಷಗಳಿಂದ ಒಂದಿಲ್ಲೊಂದು ಕಾರಣಗಳಿಂದ ಪದೇ ಪದೇ ಮುಂದೂಡಲಾಗಿದ್ದ ಕರ್ನಾಟಕ ಸ್ಥಳೀಯ ಸಂಸ್ಥೆಗಳ ಚುನಾವಣೆಯು ಮುಂಬರುವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ