Breaking News

ಈಶ್ವರಪ್ಪ ಅವರ ವಿರುದ್ಧ ಎಫ್ ಐಆರ್ ದಾಖಲ

Spread the love

ಶಿವಮೊಗ್ಗ: ಲೋಕಸಭಾ ಚುನಾವಣೆ ನೀತಿ ಸಂಹಿತೆ ಉಲ್ಲಂಘಿಸಿದ ಮಾಜಿ ಡಿಸಿಎಂ ಕೆ.ಎಸ್.ಈಶ್ವರಪ್ಪ ಅವರ ವಿರುದ್ಧ ಎಫ್ ಐಆರ್ ದಾಖಲಾಗಿದೆ.

ಚುನಾವಣಾಧಿಕಾರಿಯಿಂದ ಅಗತ್ಯ ಅನುಮತಿ ಪಡೆಯದೆ ರಾಜಕೀಯ ಕಾರ್ಯಕ್ರಮ ಆಯೋಜಿಸಿ ನೀತಿ ಸಂಹಿತೆ ಉಲ್ಲಂಘನೆ ಮಾಡಿದ ಆರೋಪ ಕೇಳಿಬಂದಿದೆ.ಈ ಹಿನ್ನೆಲೆಯಲ್ಲಿ ಎಫ್‌ಐಆರ್‌ ದಾಖಲಾಗಿದೆ ಎಂದು ತಿಳಿದುಬಂದಿದೆ.

 

ಶುಕ್ರವಾರ ತೀ‍ರ್ಥಹಳ್ಳಿ ತಾಲ್ಲೂಕು ನೊಣಬೂರು ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಅಂಬುತೀರ್ಥದ ದೇವಸ್ಥಾನ ಒಂದರಲ್ಲಿ ಪೂಜಾ ಕಾ‍ರ್ಯಕ್ರಮ ನೆರವೇರಿಸಿ ಅಲ್ಲೇ ಹತ್ತಿರದಲ್ಲೇ ಅರ್ಚಕರ ಮನೆ ಅಂಗಳದಲ್ಲಿ ಸುಮಾರು ೫೦ರಿಂದ ೬೦ ಜನರನ್ನು ಸೇರಿಸಿಕೊಂಡು ೫೦ ಕುರ್ಚಿಗಳು ಹಾಗೂ ಹ್ಯಾಂಡ್‌ ಮೈಕ್‌ ಒಳಗೊಂಡಂತೆ ಸಣ್ಣ ವೇದಿಕೆ ರೀತಿಯಲ್ಲಿ ಸಭೆ ನಡೆಸಿ ಅವರು ರಾಜಕೀಯ ಪ್ರೇರಿತ ಭಾಷಣವನ್ನು ಮಾಡಿದ್ದಾರೆ.

ಚುನಾವಣಾಧಿಕಾರಿಗಳ ಕಚೇರಿಯಿಂದ ಯಾವುದೇ ರೀತಿಯ ಅನುಮತಿ ಪಡೆದಿಲ್ಲ. ಇದು ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಹಾಗೂ ಅಸಂಜ್ಞೆಯ ಅಪರಾದ ಪ್ರಕರಣವಾದ್ದರಿಂದ ನ್ಯಾಯಾಲಯದ ಅನುಮತಿ ಪಡೆದು ಈಶ್ವರಪ್ಪ ಅವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.


Spread the love

About Laxminews 24x7

Check Also

5 ಹುಲಿಗಳು ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಅರಣ್ಯಾಧಿಕಾರಿಗಳಿಗೆ ಕಡ್ಡಾಯ ರಜೆ ನೀಡಿ ಪಿಸಿಸಿಎಫ್ ಆದೇಶಿಸಿದ್ದಾರೆ.

Spread the loveಚಾಮರಾಜನಗರ: ಮಲೆಮಹದೇಶ್ವರ ವನ್ಯಜೀವಿಧಾಮದ ಮೀಣ್ಯಂ ಅರಣ್ಯದಲ್ಲಿ 5 ಹುಲಿಗಳು ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಅರಣ್ಯಾಧಿಕಾರಿಗಳಿಗೆ ಕಡ್ಡಾಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ