Breaking News

4 ಕೋಟಿ ಹಣದೊಂದಿಗೆ ಬಿಜೆಪಿ ಸದಸ್ಯ ಸೇರಿ ಮೂವರ ಬಂಧನ

Spread the love

ಶನಿವಾರ ಚೆನ್ನೈನ ತಾಂಬರಂ ರೈಲು ನಿಲ್ದಾಣದಲ್ಲಿ ಬಿಜೆಪಿ ಕಾರ್ಯಕರ್ತ ಸೇರಿದಂತೆ ಮೂವರನ್ನು 4 ಕೋಟಿ ರೂ ನೊಂದಿಗೆ ವಶಕ್ಕೆ ಪಡೆಯಲಾಗಿದೆ. ವಶಪಡಿಸಿಕೊಂಡ ಹಣವನ್ನು ಹೆಚ್ಚಿನ ತನಿಖೆಗಾಗಿ ಆದಾಯ ತೆರಿಗೆ ಇಲಾಖೆಗೆ ಕಳುಹಿಸಲಾಗಿದೆ ಎಂದು ಚೆಂಗಲ್ಪಟ್ಟು ಡಿಇಒ ತಿಳಿಸಿದ್ದಾರೆ.

ಆರೋಪಿಗಳಾದ ಬಿಜೆಪಿ ಸದಸ್ಯ ಹಾಗೂ ಖಾಸಗಿ ಹೋಟೆಲ್ ಮ್ಯಾನೇಜರ್ ಸತೀಶ್, ಆತನ ಸಹೋದರ ನವೀನ್ ಮತ್ತು ಒಬ್ಬ ಚಾಲಕ ಪೆರುಮಾಳ್ ಸೇರಿ ಆರು ಬ್ಯಾಗ್ ಗಳಲ್ಲಿ 4 ಕೋಟಿ ರೂ ಹಣವನ್ನು ಮೂವರು ರೈಲಿನಲ್ಲಿ ತಿರುನಲ್ವೇಲಿಗೆ ತೆರಳಬೇಕಿದ್ದಾಗ ಫ್ಲೈಯಿಂಗ್ ಸ್ಕ್ವಾಡ್ ಅವರನ್ನು ವಶಕ್ಕೆ ಪಡೆದಿದೆ.

ಮೂಲಗಳ ಪ್ರಕಾರ, ತಿರುನಲ್ವೇಲಿ ಬಿಜೆಪಿ ಸಂಸದ ನೈನಾರ್ ನಾಗೇಂತಿರನ್ ಅವರ ತಂಡದ ಸೂಚನೆಯಂತೆ ನಡೆದು ಕೊಂಡಿರುವುದಾಗಿ ಸತೀಶ್ ತಪ್ಪೊಪ್ಪಿಕೊಂಡಿದ್ದಾರೆ ಎನ್ನಲಾಗಿದೆ.

“ಚೆನ್ನೈನ ತಾಂಬರಂ ರೈಲು ನಿಲ್ದಾಣದಲ್ಲಿ ಶನಿವಾರ ಫ್ಲೈಯಿಂಗ್ ಸ್ಕ್ವಾಡ್ 4 ಕೋಟಿ ರೂ.ಗಳನ್ನು ವಶಪಡಿಸಿಕೊಂಡಿದೆ. ಹೆಚ್ಚಿನ ತನಿಖೆಗಾಗಿ ಆದಾಯ ತೆರಿಗೆ ಇಲಾಖೆಗೆ ಕಳುಹಿಸಲಾಗಿದೆ,” ಎಂದು ಚೆಂಗಲ್ಪಟ್ಟು ಡಿಇಒ ಹೇಳಿದರು.

39 ಲೋಕಸಭಾ ಸ್ಥಾನಗಳನ್ನು ಹೊಂದಿರುವ ತಮಿಳುನಾಡಿನಲ್ಲಿ ಏಪ್ರಿಲ್ 19 ರಂದು ಒಂದೇ ಹಂತದಲ್ಲಿ ಮತದಾನ ನಡೆಯಲಿದೆ.


Spread the love

About Laxminews 24x7

Check Also

ಚಾಮುಂಡಿ ಬೆಟ್ಟಕ್ಕೆ ಎಲ್ಲಾ ಧರ್ಮದವರಿಗೂ ಪ್ರವೇಶವಿದೆ: ಡಿಸಿಎಂ

Spread the loveಬೆಂಗಳೂರು : ಚಾಮುಂಡಿ ಬೆಟ್ಟಕ್ಕೆ ಎಲ್ಲ ಧರ್ಮದವರಿಗೂ ಪ್ರವೇಶವಿದೆ. ಎಲ್ಲಾ ಸಮಾಜದವರು ಚಾಮುಂಡಿ ಬೆಟ್ಟಕ್ಕೆ ಹೋಗುತ್ತಾರೆ, ದೇವರ ಬಳಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ