Breaking News

ಡಾ.ಅಂಜಲಿ ನಾಮಪತ್ರ ಸಲ್ಲಿಕೆ ಏ.16ರಂದು

Spread the love

ಖಾನಾಪುರ: ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಡಾ.ಅಂಜಲಿ ನಿಂಬಾಳಕರ ಏ.16ರಂದು ಕಾರವಾರದ ಚುನಾವಣಾಧಿಕಾರಿ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಲಿದ್ದಾರೆ ಎಂದು ಪಕ್ಷದ ಮುಖಂಡ ಭರತೇಶ ತೋರೋಜಿ ಹೇಳಿದರು.

ಪಟ್ಟಣದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ನಾಮಪತ್ರ ಸಲ್ಲಿಕೆ ಸಂದರ್ಭದಲ್ಲಿ ಡಾ.ಅಂಜಲಿ ಅವರೊಂದಿಗೆ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ, ಉತ್ತರ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ವೈದ್ಯ, ಮಾಜಿ ಸಚಿವ ಆರ್.ವಿ ದೇಶಪಾಂಡೆ, ಶಾಸಕರಾದ ಭೀಮಣ್ಣ ನಾಯ್ಕ, ಬಾಬಾಸಾಹೇಬ ಪಾಟೀಲ, ಸತೀಶ ಸೈಲ್ ಪಕ್ಷದ ಜಿಲ್ಲಾ ಘಟಕದ ಅಧ್ಯಕ್ಷ ಸಾಯಿ ಗಾಂವಕರ, ಮುಖಂಡರಾದ ನಿವೇದಿತಾ ಆಳ್ವಾ, ಪ್ರಶಾಂತ ದೇಶಪಾಂಡೆ ಸೇರಿದಂತೆ ಪಕ್ಷದ ರಾಜ್ಯ ಹಾಗೂ ಜಿಲ್ಲಾ ಘಟಕದ ಮುಖಂಡರು ಮತ್ತು ಕಾರ್ಯಕರ್ತರು ಉಪಸ್ಥಿತರಿರಲಿದ್ದಾರೆ.

ನಾಮಪತ್ರ ಸಲ್ಲಿಕೆ ಕಾರ್ಯಕ್ರಮದಲ್ಲಿ ಭಾಗವಹಿಸಲು ಬೆಳಗಾವಿ ಜಿಲ್ಲೆಯ ಕಿತ್ತೂರು ಮತ್ತು ಖಾನಾಪುರ ವಿಧಾನಸಭಾ ಕ್ಷೇತ್ರಗಳಿಂದ ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರು ಕಾರವಾರಕ್ಕೆ ತೆರಳಲಿದ್ದಾರೆ ಎಂದು ತಿಳಿಸಿದರು.


Spread the love

About Laxminews 24x7

Check Also

ಬಂಗಾರ ಪ್ರಿಯರಿಗೆ ಗುಡ್‌ ನ್ಯೂಸ್‌ – 10 ಗ್ರಾಂ ಚಿನ್ನದ ಬೆಲೆ 2,900 ರೂ. ಇಳಿಕೆ

Spread the loveಬೆಂಗಳೂರು: ಕೊಲ್ಲಿ ರಾಷ್ಟ್ರಗಳ ಯುದ್ಧದ ಬಿಸಿ ನಡುವೆಯೂ ಬಂಗಾರ ಪ್ರಿಯರಿಗೆ ಗುಡ್‌ನ್ಯೂಸ್‌ ಸಿಕ್ಕಿದೆ. ಸತತ ಏರುಗತಿಯಲ್ಲಿ ಸಾಗುತ್ತಿದ್ದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ