ಬೆಳಗಾವಿ: ‘ನಾಮಪತ್ರ ಸಲ್ಲಿಸುವಾಗ ಮೌಢ್ಯ ಅನುಸರಿಸಲ್ಲ. ಒಳ್ಳೆಯ ಕಾಲ, ಕೆಟ್ಟ ಕಾಲ ಎಂಬುದು ಇಲ್ಲ. ನಮ್ಮ ಎಲ್ಲ ಶಾಸಕರು ಲಭ್ಯವಿದ್ದ ದಿನ ಚಿಕ್ಕೋಡಿ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಮಗಳು ಪ್ರಿಯಾಂಕಾ ನಾಮಪತ್ರ ಸಲ್ಲಿಸುವರು’ ಎಂದು ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಹೇಳಿದರು.

ಶನಿವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು, ‘ನಾವು ಒಳ್ಳೆಯದು ಮಾಡಿದರೆ ಒಳ್ಳೆಯದಾಗುತ್ತದೆ. ಕೆಟ್ಟದ್ದು ಮಾಡಿದರೆ ಕೆಟ್ಟದ್ದಾಗುತ್ತದೆ. ಕಾಲದ ಮೇಲೆ ಯಾವುದೂ ಅವಲಂಬಿತವಲ್ಲ. ಬೇರೆಡೆ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸುವಾಗ ನಾನು ಹೋಗಬೇಕು. ಪ್ರಿಯಾಂಕಾ ನಾಮಪತ್ರ ಸಲ್ಲಿಸುವಾಗ ಸಮಯ ಹೊಂದಿಸಿಕೊಳ್ಳುವೆ’ ಎಂದರು.
Laxmi News 24×7