ಅರಬಾವಿ: ’25 ವರ್ಷಗಳ ಹಿಂದೆ ಕಾಂಗ್ರೆಸ್ ಪಕ್ಷದಲ್ಲಿ ಸಾಮಾನ್ಯ ಕಾರ್ಯಕರ್ತೆಯಾಗಿ ರಾಜಕೀಯ ಜೀವನ ಆರಂಭಿಸಿದ ನಾನು, ಇಂದು ಏಳು ಕೋಟಿ ಜನಸಂಖ್ಯೆ ಪ್ರತಿನಧಿಸಲು ಏಕೈಕ ಮಹಿಳಾ ಮಂತ್ರಿಯಾಗಿದ್ದೇನೆ. ಸಾಮಾನ್ಯ ಕಾರ್ಯಕರ್ತರಿಗೆ ಕಾಂಗ್ರೆಸ್ ಪಕ್ಷದಲ್ಲಿ ತೋರುವ ಮಹತ್ವ ಇದು.
ಇದನ್ನು ಗಮನಿಸಿ ಸ್ಥಳೀಯ ಅಭ್ಯರ್ಥಿ, ನಿಮ್ಮ ಮನೆ ಮಗ ಮೃಣಾಲ್ ಹೆಬ್ಬಾಳ್ಕರ್ ಅವರನ್ನು ಬೆಂಬಲಿಸಿ’ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮಿ ಹೆಬ್ಬಾಳಕರ ಹೇಳಿದರು.
ಅರಬಾವಿ ವಿಧಾನಸಭಾ ಕ್ಷೇತ್ರದ ಮೆಳವಂಕಿ ಹಾಗೂ ಕೌಜಲಗಿ ಜಿಲ್ಲಾ ಪಂಚಾಯಿತಿ ವ್ಯಾಪ್ತಿಯಲ್ಲಿ ಶುಕ್ರವಾರ ನಡೆದ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶದಲ್ಲಿ ಮಾತನಾಡಿದ ಅವರು, ‘ಕಾಂಗ್ರೆಸ್ ಕಾರ್ಯಕರ್ತರು ಈ ಬಾರಿ ಮೈಮರೆಯದೆ ಕೆಲಸ ಮಾಡಬೇಕು’ ಎಂದು ಕರೆ ನೀಡಿದರು.
‘ತಾಯಿ ಲಕ್ಷ್ಮಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಅವರ ಮಾರ್ಗದರ್ಶನದಲ್ಲಿ ಸ್ಪರ್ಧಿಸುತ್ತಿದ್ದೇನೆ. ಈ ಬಾರಿ ಕಾಂಗ್ರೆಸ್ ಗೆಲುವಿಗೆ ಎಲ್ಲರೂ ಸಹಕರಿಸಬೇಕು’ ಎಂದು ಅಭ್ಯರ್ಥಿ ಮೃಣಾಲ್ ಮನವಿ ಮಾಡಿದರು.