ಮೈಸೂರು: ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಮೈಸೂರು ಮತ್ತು ಚಾಮರಾಜನಗರ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳನ್ನು ಗೆಲ್ಲಿಸಿಕೊಂಡು ಬರುವೆ ಎಂದು ಪಣತೊಟ್ಟಿರುವ ಸಿಎಂ ಸಿದ್ದರಾಮಯ್ಯಗೆ ಇದೀಗ ಭಾರೀ ಮುಖಭಂಗ ಉಂಟಾಗಿದ್ದು, ನಮಗೆ ಚುನಾವಣೆಯೇ ಬೇಡ, ಚುನಾವಣೆ ಬಹಿಷ್ಕರಿಸುತ್ತೇವೆ ಎಂದು ಗ್ರಾಮಸ್ಥರು ಎಚ್ಚರಿಕೆ ನೀಡಿದ್ದಾರೆ.

ಚಾಮರಾಜನಗರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿರುವ ಸುನಿಲ್ ಬೋಸ್ ಪರ ಮತ ಕೇಳಲು ಹೋದ ಸಿಎಂ ಪುತ್ರ ಯತೀಂದ್ರ ಸಿದ್ದರಾಮಯ್ಯರನ್ನು ತರಾಟೆಗೆ ತೆಗೆದುಕೊಂಡ ಗ್ರಾಮಸ್ಥರು, ಹೋಗಿ ಹೋಗಿ ನಾವು ವೋಟ್ ಹಾಕಲ್ಲ. ಚುನಾವಣೆ ಬಹಿಷ್ಕರಿಸುತ್ತೇವೆ ಅಷ್ಟೇ ಎಂದು ನೇರ ಸವಾಲು ಹಾಕಿದ್ದಾರೆ.
ಸಿಎಂ ತವರಿನಲ್ಲೇ ಚುನಾವಣಾ ಬಹಿಷ್ಕಾರದ ಕೂಗು ಕೇಳಿಬಂದಿದ್ದು, ಪ್ರತಿಭಟನಾಕಾರರು ಯತೀಂದ್ರರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.
ಸುನಿಲ್ ಬೊಸ್ ಜಯಕ್ಕಾಗಿ ಮತಯಾಚನೆಗೆ ತೆರಳಿದ್ದ ಸಿದ್ದರಾಮಯ್ಯ ಪುತ್ರ ಯತೀಂದ್ರರ ವಿರುದ್ಧ ರೈತರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
Laxmi News 24×7