Breaking News
Home / ರಾಜಕೀಯ / ಪಕ್ಷೇತರ ಅಭ್ಯರ್ಥಿಯಾಗಿ ದಿಂಗಾಲೇಶ್ವರ ಶ್ರೀ ಕಣಕ್ಕೆ:

ಪಕ್ಷೇತರ ಅಭ್ಯರ್ಥಿಯಾಗಿ ದಿಂಗಾಲೇಶ್ವರ ಶ್ರೀ ಕಣಕ್ಕೆ:

Spread the love

ಬೆಂಗಳೂರು: ಧಾರವಾಡ ಲೋಕಸಭಾ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲು ಗದಗ ಜಿಲ್ಲೆಯ ಶಿರಹಟ್ಟಿಯ ಭಾವೈಕ್ಯ ಪೀಠದ ಫಕೀರ ದಿಂಗಾಲೇಶ್ವರ ಸ್ವಾಮೀಜಿ ನಿರ್ಧರಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಸೋಮವಾರ ಈ ವಿಷಯ ತಿಳಿಸಿದ ಅವರು, ‘ಎರಡೂ ರಾಷ್ಟ್ರೀಯ ಪಕ್ಷಗಳು ಎಲೆಕ್ಷನ್‌ ಫಿಕ್ಸಿಂಗ್‌ ಮಾಡಿಕೊಂಡಿವೆ ಎಂದು ಜನರು ಮಾತನಾಡುತ್ತಿದ್ದಾರೆ.

ಇದು ಮತದಾರರಿಗೆ ಮಾಡುವ ಮೋಸ’ ಎಂದರು.

ಧಾರವಾಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ, ಹಾಲಿ ಸಂಸದ ಪ್ರಲ್ಹಾದ ಜೋಶಿ ವಿರುದ್ಧ ಅವರ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು.

‘ನನ್ನ ಸ್ಪರ್ಧೆಯು ಕಾಂಗ್ರೆಸ್‌ ಮತ್ತು ಬಿಜೆಪಿ ಈ ಎರಡೂ ರಾಷ್ಟ್ರೀಯ ಪಕ್ಷಗಳ ವಿರುದ್ಧ ಮತ್ತು ಸ್ವಾರ್ಥಿ ರಾಜಕಾರಣಿಗಳ ದುರಾಡಳಿತದ ವಿರುದ್ಧ ಸ್ವಾಭಿಮಾನಿಗಳು ಸಾರಿದ ಧರ್ಮ ಯುದ್ದ’ ಎಂದು ವಿಶ್ಲೇಷಿಸಿದರು.

‘ಜನರಲ್ಲಿ ರಾಷ್ಟ್ರೀಯ ಪ್ರಜ್ಞೆ ಮೂಡಿಸಲು, ರಾಜಕೀಯ ಪ್ರವೇಶ ಮಾಡುತ್ತಿದ್ದೇನೆ. ಧರ್ಮದಲ್ಲಿ ರಾಜಕೀಯ ಇರಬಾರದು. ರಾಜಕೀಯದಲ್ಲಿ ಧರ್ಮ ಇರಬೇಕು ಎಂದು ಜನರ ಬಯಸಿದ್ದಾರೆ. ಈ ವಿಚಾರವನ್ನು ಚುನಾವಣೆಯ ನಂತರವೂ ಮುಂದುವರಿಸುತ್ತೇನೆ’ ಎಂದರು.

‘ನೊಂದ ಸಮಾಜಗಳು , ನಾಯಕರು ತಮ್ಮ ನೋವು ತೋಡಿಕೊಂಡ ಕಾರಣ ಈ ನಿರ್ಧಾರ ತೆಗೆದುಕೊಂಡಿದ್ದೇನೆ. ಕುರುಬ, ರೆಡ್ಡಿ, ಜಂಗಮ, ಅಂಬಿಗ ಹೀಗೆ ಬಹಳಷ್ಟು ಸಮಾಜಗಳನ್ನು ಅಲಕ್ಷ್ಯ ಮಾಡಿ ಅತ್ಯಂತ ಕಡಿಮೆ ಜನಸಂಖ್ಯೆ ಇರುವವರಿಗೆ ಮೂರು ಸ್ಥಾನಗಳನ್ನು ಕೊಟ್ಟಿರುವುದು ಬಹುಸಂಖ್ಯಾತರ ನೋವಿಗೆ ಕಾರಣವಾಗಿದೆ. ಎಲ್ಲಿದೆ ಸಾಮಾಜಿಕ ನ್ಯಾಯ’ ಎಂದೂ ಅವರು ಪ್ರಶ್ನಿಸಿದರು


Spread the love

About Laxminews 24x7

Check Also

ಮಾಜಿ ಪ್ರಧಾನಿಗಳ ಮೊಮ್ಮಗ, ಸಂಸದ ದೇಶ ಬಿಟ್ಟು ಪರಾರಿಯಾಗಿರುವುದು ನಾಚಿಕೆಗೇಡು : ಡಿಕೆಶಿ

Spread the loveಬೆಂಗಳೂರು,ಏ.28- ತಲೆ ತಗ್ಗಿಸುವ ಕೆಲಸ ಮಾಡಿ ಮಾಜಿ ಪ್ರಧಾನಿಗಳ ಮೊಮ್ಮಗ ಹಾಗೂ ಸಂಸದ ದೇಶ ಬಿಟ್ಟು ಪರಾರಿಯಾಗಿರುವುದು ನಾಚಿಕೆಗೇಡಿನ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ