ಹುಬ್ಬಳ್ಳಿ: ‘ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ರಾಜ್ಯವನ್ನು ಪಾಕಿಸ್ತಾನಕ್ಕಿಂತ ಕಡೆ ಮಾಡುತ್ತಿದ್ದಾರೆ’ ಎಂದು ಧಾರವಾಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಪ್ರಲ್ಹಾದ ಜೋಶಿ ಆರೋಪಿಸಿದರು.
ಬೆಂಗಳೂರಿನ ನಗರ್ತಪೇಟೆಯಲ್ಲಿ ಅಂಗಡಿಯಲ್ಲಿ ಹನುಮಾನ್ ಚಾಲೀಸ ಹಾಕಿದ್ದಕ್ಕೆ ಹಲ್ಲೆಗೊಳಗಾಗಿದ್ದ ವ್ಯಕ್ತಿಯ ಮೇಲೆ ಎಫ್‌ಐಆರ್ ದಾಖಲಿಸಿದ್ದಕ್ಕೆ ಭಾನುವಾರ ಇಲ್ಲಿ ಪ್ರತಿಕ್ರಿಯಿಸಿದ ಅವರು, ‘ನಿಮ್ಮ ತುಷ್ಟೀಕರಣದ ರಾಜ್ಯದಲ್ಲಿ ಹನುಮಾನ್ ಚಾಲೀಸ ಪಠಣ ಮಾಡಲು ನಿರ್ಬಂಧ ಇದೆಯೇ?

ಇದು ಖಂಡನೀಯ. ಕೂಡಲೇ ಪ್ರಕರಣ ಹಿಂಪಡೆಯಬೇಕು’ ಎಂದು ಆಗ್ರಹಿಸಿದರು.
‘ಅವರು ಬೆಳಿಗ್ಗೆ 6 ಗಂಟೆಗೂ ಮುನ್ನ ಮೈಕ್ ಹಾಕಿ ಆಜಾನ್ ಕೂಗಿ, ನಮಾಜ್ ಮಾಡಹುದು. ಆದರೆ, ನಾವು ಅಂಗಡಿಯಲ್ಲಿ ಹನುಮಾನ ಚಾಲೀಸ ಹಾಕಬಾರದೆ?. ನೀವು ಕರ್ನಾಟಕವನ್ನು ಆಳುತ್ತೀದ್ದೀರೊ ಅಥವಾ ಇಸ್ಲಾಮಿಕ್ ರಾಷ್ಟ್ರವನ್ನು ಆಳುತ್ತಿದ್ದೀರೊ’ ಎಂದು ಪ್ರಶ್ನಿಸಿದರು.
Laxmi News 24×7