Breaking News

ಹೈಕೋರ್ಟ್ ತೀರ್ಪು ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೊರೆಹೋಗಲಿರುವ ಕೇಜ್ರಿವಾಲ್

Spread the love

ಹೊಸದಿಲ್ಲಿ: ದಿಲ್ಲಿ ಅಬಕಾರಿ ನೀತಿ ಹಗರಣದಲ್ಲಿ ನಡೆದಿದೆ ಎನ್ನಲಾದ ಅಕ್ರಮ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ(ಈಡಿ)ವು ತಮ್ಮನ್ನು ಬಂಧಿಸಿರುವುದನ್ನು ಪ್ರಶ್ನಿಸಿ ಸಲ್ಲಿಸಿದ್ದ

ಅರ್ಜಿಯನ್ನು ದಿಲ್ಲಿ ಹೈಕೋರ್ಟ್ ತಿರಸ್ಕರಿಸಿರುವುದನ್ನು ಪ್ರಶ್ನಿಸಿ, ದಿಲ್ಲಿ ಸಿಎಂ ಅರವಿಂದ್ ಕೇಜ್ರಿವಾಲ್ ಸುಪ್ರೀಂ ಕೋರ್ಟ್‌ ಮೊರೆ ಹೋಗಲಿದ್ದಾರೆ ಎಂದು ದಿಲ್ಲಿ ಸಚಿವ ಸೌರಭ್ ಭಾರಧ್ವಜ್ ಹೇಳಿದ್ದಾರೆ.

ಕೋರ್ಟ್ ತೀರ್ಪಿನ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿರುವ ಎಎಪಿ ಹಿರಿಯ ನಾಯಕರೂ ಆಗಿರುವ ಸೌರಭ್ ಭಾರಧ್ವಜ್, ‘ನಾವು ಹೈಕೋರ್ಟ್‌ ತೀರ್ಪನ್ನು ಗೌರವಿಸುತ್ತೇವೆ. ತೀರ್ಪನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ಗೆ ಮನವಿ ಸಲ್ಲಿಸಲು ಯೋಚಿಸಿದ್ದೇವೆ.

ಅಬಕಾರಿ ನೀತಿ ಹಗರಣವು ದೊಡ್ಡ ರಾಜಕೀಯ ಪಿತೂರಿʼ ಎಂದರು.


Spread the love

About Laxminews 24x7

Check Also

ಸರ್ಕಾರಿ ಬಸ್‌ಗಳ ಮೇಲಿನ ಜಾಹೀರಾತಿಗೆ ಬ್ರೇಕ್ – 15 ದಿನದೊಳಗೆ ಜಾಹೀರಾತು ತೆರವಿಗೆ ಸೂಚನೆ

Spread the loveಬೆಂಗಳೂರು: ಸರ್ಕಾರಿ ಸಾರಿಗೆ ಬಸ್‌ಗಳ ಮೇಲೆ ತಂಬಾಕು ಜಾಹೀರಾತು  ವಿರುದ್ಧ ಜನಾಕ್ರೋಶ ಹೆಚ್ಚಾಗಿತ್ತು. ಬಸ್‌ಗಳ ಮೇಲಿನ ಜಾಹೀರಾತು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ