Breaking News

ಮೋದಿ ಭಾವಚಿತ್ರ, ಹೆಸರು ಬಳಕೆಗೆ ಈಶ್ವರಪ್ಪಗೆ ನಿರ್ಬಂಧಿಸಿ : ಚುನಾವಣಾ ಆಯೋಗಕ್ಕೆ ದೂರು ನೀಡಿದ ಬಿಜೆಪಿ

Spread the love

ಬೆಂಗಳೂರು : ಲೋಕಸಭೆ ಚುನಾವಣೆಗೆ ತಮ್ಮ ಮಗನಿಗೆ ಟಿಕೆಟ್ ನೀಡಿಲ್ಲವೆಂದು ಬಂಡಾಯ ಎದ್ದಿರುವ ಮಾಜಿ ಸಚಿವ ಕೆಎಸ್ ಈಶ್ವರಪ್ಪ ಅವರು ಶಿವಮೊಗ್ಗ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಈ ವೇಳೆ ಅವರು ಮೋದಿ ಅವರ ಭಾವಚಿತ್ರ ಹಾಗೂ ಹೆಸರನ್ನು ಬಳಸಿದಂತೆ ನಿರ್ಬಂಧಿಸಿ ಇದೀಗ ಬಿಜೆಪಿಯು ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸಿದೆ.

ಚುನಾವಣಾ ವೇಳೆ ಮೋದಿ ಭಾವಚಿತ್ರ ಹೆಸರು ಬಳಕೆಗೆ ಕೆಎಸ್ ಈಶ್ವರಪ್ಪಗೆ ನಿರ್ಬಂಧ ವಿಧಿಸುವಂತೆ ಕೋರಿ ಚುನಾವಣಾ ಆಯೋಗಕ್ಕೆ ಇದೀಗ ಬಿಜೆಪಿ ದೂರು ಸಲ್ಲಿಸಿದೆ. ರಾಜ್ಯ ಬಿಜೆಪಿ ಘಟಕದ ಪ್ರಧಾನ ಕಾರ್ಯದರ್ಶಿ ಪಿ ರಾಜೀವ್ ವಿಧಾನ ಪರಿಷತ್ ಸದಸ್ಯ ಚಲವಾದಿ ನಾರಾಯಣ ಸ್ವಾಮಿ ನೇತೃತ್ವದಲ್ಲಿ ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸಲಾಗಿದೆ ಎಂದು ತಿಳಿದುಬಂದಿದೆ.

ಈಶ್ವರಪ್ಪ ಚುನಾವಣಾ ಪ್ರಚಾರಕ್ಕೆ ಮೋದಿ ಫೋಟೋ ಬಳಸುತ್ತಿದ್ದಾರೆ. ಮೋದಿ ಭಾವಚಿತ್ರ ಬಳಸದಂತೆ ನಿರ್ಬಂಧಿಸಲು ಕೋರಿ ಚುನಾವಣಾ ಆಯೋಗಕ್ಕೆ ದೂರು ನೀಡಲಾಗಿದೆ. ಕೆಎಸ್ ಈಶ್ವರಪ್ಪ ಹೀಗೆ ಮುಂದುವರೆದರೆ ಅವರ ವಿರುದ್ಧ ಕಾನೂನು ಕ್ರಮ ಆಗುತ್ತದೆ. ಈಶ್ವರಪ್ಪ ಅವರು ಪಕ್ಷದ ಅಭ್ಯರ್ಥಿ ಅಲ್ಲದ ಕಾರಣ ಮೋದಿ ಅವರ ಭಾವಚಿತ್ರ ಬಿಜೆಪಿ ಚಿನ್ಹೆ ಬಳಸುವ ಅಧಿಕಾರ ಕೆ ಎಸ್ ಈಶ್ವರಪ್ಪ ಅವರಿಗೆ ಇರುವುದಿಲ್ಲ ಎಂದು ಚುನಾವಣಾ ಆಯೋಗಕ್ಕೆ ದೂರು ನೀಡಿದ ಬಳಕ ಎಂಎಲ್‌ಸಿ ಛಲುವಾದಿ ನಾರಾಯಣಸ್ವಾಮಿ ಹೇಳಿದರು.


Spread the love

About Laxminews 24x7

Check Also

ಏಪ್ರಿಲ್‌ಗೆ ಜಿಬಿಎ, ಸ್ಥಳೀಯ ಸಂಸ್ಥೆ ಚುನಾವಣೆ ಸಿದ್ಧತೆಗೆ ಜಿಲ್ಲಾಧಿಕಾರಿಗಳಿಗೆ ಆಯೋಗ ಸೂಚನೆ

Spread the loveಬೆಂಗಳೂರು:ಕಳೆದ ನಾಲ್ಕೈದು ವರ್ಷಗಳಿಂದ ಒಂದಿಲ್ಲೊಂದು ಕಾರಣಗಳಿಂದ ಪದೇ ಪದೇ ಮುಂದೂಡಲಾಗಿದ್ದ ಕರ್ನಾಟಕ ಸ್ಥಳೀಯ ಸಂಸ್ಥೆಗಳ ಚುನಾವಣೆಯು ಮುಂಬರುವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ