ಶಿವಮೊಗ್ಗ: ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರನ್ನು ಕೆಲವು ಮಾಧ್ಯಮಗಳು ವೈಭವೀಕರಿಸುವ ಪ್ರಯತ್ನ ನಡೆಸುತ್ತಿವೆ. ಇದಕ್ಕೆ ನನ್ನ ಅಭ್ಯಂತರವಿಲ್ಲ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ತಿಳಿಸಿದ್ದಾರೆ.ಶಿವಮೊಗ್ಗದಲ್ಲಿ ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವರು ಶಿರಾ ಉಪ ಚುನಾವಣೆಯಲ್ಲಿ ವಿಜಯೇಂದ್ರ ಅವರ ಪ್ರಯತ್ನದಿಂದ ಗೆಲುವು ಸಾಧ್ಯವಾಯಿತು ಎಂದು ಕೆಲವು ಮಾಧ್ಯಮಗಳಲ್ಲಿ ವೈಭವೀಕರಿಸುವ ಪ್ರಯತ್ನ ನಡೆಯಿತು. ಬಿಜೆಪಿ ಯಾವುದೇ ಒಬ್ಬ ವ್ಯಕ್ತಿಯ ಪ್ರಯತ್ನದಿಂದ ಚುನಾವಣೆ ಗೆಲ್ಲಲ್ಲ. ಸಂಘಟನೆಯ ಪ್ರಯತ್ನದಿಂದ ಚುನಾವಣೆಯಲ್ಲಿ ಗೆಲುವು ಸಾಧ್ಯವಾಯಿತು ಎಂದು ಹೇಳಿದ್ದಾರೆ.
Laxmi News 24×7