ಕೊಪ್ಪಳ: ಲೋಕಸಭಾ ಚುನಾವಣೆ ಸಂಬಂಧ ನೀತಿ ಸಂಹಿತೆ ಜಾರಿಯಾದ ಮಾ. 16 ರಿಂದ ಏ. 09 ರವರೆಗೆ ಜಿಲ್ಲಾ ಅಬಕಾರಿ ಇಲಾಖೆಯಿಂದ ಒಟ್ಟು 50,61,464 ರೂ. ಮೌಲ್ಯದ ವಸ್ತುಗಳನ್ನು ಜಪ್ತಿ ಮಾಡಲಾಗಿದೆ ಎಂದು ಅಬಕಾರಿ ಉಪ ಆಯುಕ್ತ ಬಿ.ಆರ್.ಹಿರೇಮಠ್ ಅವರು ತಿಳಿಸಿದ್ದಾರೆ.
ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಮಾ.
16 ರಿಂದ ಏ.09 ರವರೆಗೆ ಜಿಲ್ಲಾ ಅಬಕಾರಿ ಇಲಾಖೆಯಿಂದ ಒಟ್ಟು 196 ದಾಳಿಗಳನ್ನು ನಡೆಸಲಾಗಿದ್ದು, 147 ಪ್ರಕರಣಗಳನ್ನು ದಾಖಲಿಸಲಾಗಿದೆ. ಈ ಪ್ರಕರಣಗಳಿಗೆ ಸಂಬಂಧಿಸಿದಂತೆ 127 ಜನರನ್ನು ಬಂಧಿಸಲಾಗಿದೆ.
ಪ್ರಕರಣಗಳಲ್ಲಿ 4286.190 ಲೀ. ಮದ್ಯ ವಶಕ್ಕೆ ಪಡೆದಿದೆ. ಜೊತೆಗೆ 1 ಲಾರಿ, 1 ಒಮಿನಿ ವ್ಯಾನ್ ಹಾಗೂ 23 ದ್ವಿಚಕ್ರ ವಾಹನಗಳು ಸೇರಿದಂತೆ ಒಟ್ಟು 25 ವಾಹನಗಳನ್ನು ಜಪ್ತಿ ಮಾಡಲಾಗಿದೆ. ಜಪ್ತು ಮಾಡಿದ ಮದ್ಯ ಹಾಗೂ ವಾಹನಗಳ ಒಟ್ಟು ಮೌಲ್ಯ 50,61,464 ರೂ. ಆಗಿದ್ದು, ಚುನಾವಣಾ ಅಕ್ರಮ ತಡೆಯುವ ಹಿನ್ನೆಲೆಯಲ್ಲಿ ಇಲಾಖೆಯ ಅಧಿಕಾರಿ, ಸಿಬ್ಬಂದಿ ನಿರಂತರ ಕಾರ್ಯಪ್ರವೃತ್ತರಾಗಿದ್ದಾರೆ ಎಂದು ಅಬಕಾರಿ ಉಪ ಆಯುಕ್ತರು ತಿಳಿಸಿದ್ದಾರೆ.