Breaking News

ಎಂಪಿ ಚುನಾವಣೆ ಫಲಿತಾಂಶ ಬಳಿಕ ಕಾಂಗ್ರೆಸ್ ಧೂಳಿಪಟ; ವಿಜಯೇಂದ್ರ

Spread the love

ಹಾವೇರಿ : ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಇಂದು ಹಾವೇರಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಆಗಿರುವ ಬಸವರಾಜ್ ಬೊಮ್ಮಾಯಿ ಪರ ಚುನಾವಣಾ ಪ್ರಚಾರದಲ್ಲಿ ಭಾಗಿಯಾಗಿ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಲೋಕಸಭೆ ಚುನಾವಣೆ ಬಳಿಕ ಕಾಂಗ್ರೆಸ್ ಧೂಳಿಪಟವಾಗುತ್ತದೆ ಎಂದು ಭವಿಷ್ಯ ನುಡಿದರು

ರಾಜ್ಯದಲ್ಲಿ ಮುಂದೆ ಚುನಾವಣೆ ನಡೆದರೆ ಬಿಜೆಪಿಗೆ ಸ್ಪಷ್ಟ ಬಹುಮತ ಬರಬೇಕು. ಬಿಜೆಪಿಗೆ ಸ್ಪಷ್ಟ ಬಹುಮತ ಬರುವವರೆಗೂ ಮನೆಯಲ್ಲಿ ಕೂರುವುದಿಲ್ಲ ಎಂದು ಹಾವೇರಿಯಲ್ಲಿ ರಾಜ್ಯ ಬಿಜೆಪಿ ಅಧ್ಯಕ್ಷ ಬಿ ವೈ ವಿಜಯೇಂದ್ರ ಹೇಳಿಕೆ ನೀಡಿದರು. ಸೂರ್ಯ ಚಂದ್ರ ಇರುವುದು ಎಷ್ಟು ಸತ್ಯವೋ ಹಾವೇರಿ ಕ್ಷೇತ್ರದಲ್ಲಿ ಬೊಮ್ಮಾಯಿ ಗೆಲ್ಲೋದು ಸಹ ಅಷ್ಟೇ ಸತ್ಯ 3 ಲಕ್ಷ ಮತಗಳ ಅಂತರದಿಂದ ಬಸವರಾಜ ಬೊಮ್ಮಾಯಿ ಅವರು ಗೆಲ್ಲುತ್ತಾರೆ ಎಂದರು.

ಅಂಬೇಡ್ಕರ್ ಬದುಕಿದ್ದಾಗಲೇ ಕಗ್ಗೊಲೆ ಮಾಡಿದವರು ಕಾಂಗ್ರೆಸ್ ಕಾಂಗ್ರೆಸ್ ನವರು. ಕಾಂಗ್ರೆಸ್ನವರು ಎರಡು ಬಾರಿ ಡಾಕ್ಟರ್ ಅಂಬೇಡ್ಕರ್ ಅವರನ್ನು ಸೋಲಿಸಿದರು. ಮೋದಿ ವಿರುದ್ಧ ಆಡಳಿತ ವಿರೋಧಿಯೇ ಇಲ್ಲ. ಒಂದು ದಿನವೂ ರಜೆ ತೆಗೆದುಕೊಳ್ಳದೆ ನರೇಂದ್ರ ಮೋದಿಯವರು ಕೆಲಸ ಮಾಡಿದ್ದಾರೆ.


Spread the love

About Laxminews 24x7

Check Also

ಅಕ್ರಮ ಎಸಗಿರುವ ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಒತ್ತಾಯ

Spread the loveಬೆಳಗಾವಿ: ಮಹಾನಗರ ಪಾಲಿಕೆ 8 ಮತ್ತು 9 ವಾರ್ಡ್‌ನಲ್ಲಿನ  ಆಸ್ತಿಗಳಿಗೆ ಮತ್ತೊಬ್ಬರ ಹೆಸರಿನಲ್ಲಿ ಬಾಂಡ್ ಆಧಾರದ ಮೇಲೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ