Breaking News

ಸಿಡಿಲು ಬಡಿದು ಕುರಿಗಾಯಿ ಬಾಲಕ ಮೃತ್ಯು. ಕುಟುಂಬಕ್ಕೆ ಆಸರೆಯಾಗಿದ್ದ

Spread the love

ಇಂಡಿ (ವಿಜಯಪುರ): ಗುರುವಾರ ಸಂಜೆ ಬಿರುಗಾಳಿ ಸಹಿತ ಸಿಡಿಲು ಅಪ್ಪಳಿಸಿ ಕುರಿಗಾಯಿ ಬಾಲಕ ಬಲಿಯಾಗಿರುವ ದುರ್ಘಟನೆ ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನಲ್ಲಿ ನಡೆದಿದೆ.

ಕುರಿ ಮೇಯಿಸುವಾಗ ಸಿಡಿಲಿಗೆ ಬಲಿಯಾದ ಬಾಲಕನನ್ನು ಬೀರಪ್ಪ ನಿಂಗಪ್ಪ ಅವರಾದಿ (15) ಎಂದು ಗುರುತಿಸಲಾಗಿದೆ.

ಇಂಡಿ ಪಟ್ಟಣದ ಹೊರವಲಯದಲ್ಲಿ ಬೀರಪುಪ ಕುರಿ ಮೇಯಿಸುವಾಗ ಜೋರಾಗಿ ಬಿರುಗಾಳಿ ತುಂತುರು ಮಳೆ ಸುರಿಯಲು ಆರಂಭಿಸಿದೆ. ಈ ವೇಳೆ ಮಳೆಯಿಂದ ರಕ್ಷಣೆ ಪಡೆಯಲು ಬೀರಪ್ಪ ಪಕ್ಕದಲ್ಲಿದ್ದ ಮರದ ಕೆಳಗೆ ಹೋಗಿದ್ದಾಗ ಸಿಡಿಲು ಅಪ್ಪಳಿಸಿದೆ.

ಸಿಡಿಲಿನ ಹೊಡೆತಕ್ಕೆ ಕುರಿಗಾಯಿ ಬಾಲಕ ಬೀರಪ್ಪ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಕುಟುಂಬಕ್ಕೆ ಆಸರೆಯಾಗಿದ್ದ ಮಗನನ್ನು ಕಳೆದುಕೊಂಡ ತಂದೆ-ತಾಯಿ ಸಂಬಂಧಿಕರು ಗೋಳಾಡುತ್ತಿದ್ದಾರೆ.

ಘಟನೆಯ ಮಾಹಿತಿ ತಿಳಿಯುತ್ತಲೇ ಇಂಡಿ ಶಹರ ಠಾಣೆ ಪೊಲೀಸರು ಸ್ಥಳಕ್ಕೆ ದೌಡಾಯಿಸಿದ್ದಾರೆ.


Spread the love

About Laxminews 24x7

Check Also

ನೀಟ್ ರದ್ಧತಿಗೆ ಮನನೊಂದು ಸರಣಿ ಆತ್ಮಹತ್ಯೆ – ನಾಲ್ವರು ಆಕಾಂಕ್ಷಿಗಳು ಸೂಸೈಡ್

Spread the loveನವದೆಹಲಿ: ಮೇ 3ರಂದು ನಡೆದಿದ್ದ ನೀಟ್ ಪರೀಕ್ಷೆ ರದ್ದುಗೊಂಡ ಹಿನ್ನೆಲೆ ಆಘಾತಕ್ಕೊಳಗಾಗಿ ನಾಲ್ವರು ನೀಟ್ ಆಕಾಂಕ್ಷಿಗಳು ಆತ್ಮಹತ್ಯೆಗೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ