Breaking News

ಲೋಕಸಭೆ ಚುನಾವಣೆ; 2ನೇ ಹಂತದ ಚುನಾವಣೆಗೆ ನಾಮಪತ್ರ ಸಲ್ಲಿಕೆ ಶುಕ್ರವಾರ ಆರಂಭ

Spread the love

ಬೆಂಗಳೂರು: ರಾಜ್ಯದಲ್ಲಿ ಎರಡನೇ ಹಂತದ ಲೋಕಸಭೆ ಚುನಾವಣೆಗೆ ಚುನಾವಣಾ ಆಯೋಗ ಅಧಿಸೂಚನೆ ಪ್ರಕಟಿಸಲಿದ್ದು, ಶುಕ್ರವಾರದಿಂದ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಲಿದೆ.

ಮೊದಲ ಹಂತದ 14 ಲೋಕಸಭಾ ಕ್ಷೇತ್ರಗಳಿಗೆ ಚುನಾವಣೆ ರಂಗೇರಿರುವ ಬೆನ್ನಲ್ಲೇ ಉಳಿದ 14 ಕ್ಷೇತ್ರಗಳಿಗೆ ಚುನಾವಣಾ ಆಯೋಗ ಶುಕ್ರವಾರ ಅಧಿಸೂಚನೆ ಹೊರಡಿಸಲಿದೆ.

ಲೋಕಸಭೆ ಚುನಾವಣೆ; 2ನೇ ಹಂತದ ಚುನಾವಣೆಗೆ ನಾಮಪತ್ರ ಸಲ್ಲಿಕೆ ಶುಕ್ರವಾರ ಆರಂಭ

ರಾಜ್ಯದ ಮಧ್ಯಕರ್ನಾಟಕ, ಕಲ್ಯಾಣ ಕರ್ನಾಟಕ ಹಾಗೂ ಕಿತ್ತೂರು ಕರ್ನಾಟಕ ಸೇರಿದಂತೆ 14 ಲೋಕಸಭಾ ಕ್ಷೇತ್ರಗಳಿಗೆ ಶುಕ್ರವಾರ ನಾಮಪತ್ರ ಸಲ್ಲಿಕೆ ಆರಂಭವಾಗಲಿದೆ.

ನಾಮಪತ್ರ ಸಲ್ಲಿಕೆಗೆ ಏ.19 ಕೊನೆ ದಿನ:

ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಲು ಏ.19 ಕಡೆಯ ದಿನವಾಗಿದ್ದು, 20 ರಂದು ನಾಮಪತ್ರ ಪರಿಶೀಲನೆ ನಡೆಯಲಿದೆ. 22 ರಂದು ನಾಮಪತ್ರ ಹಿಂಪಡೆಯಲು ಕೊನೆಯ ದಿನವಾಗಿದೆ. 2ನೇ ಹಂತದಲ್ಲಿ ಶಿವಮೊಗ್ಗ, ದಾವಣಗೆರೆ, ಬಳ್ಳಾರಿ, ರಾಯಚೂರು, ಕೊಪ್ಪಳ, ಬಾಗಲಕೋಟೆ, ಬೀದರ್, ವಿಜಾಪುರ, ಕಲಬುರಗಿ, ಹಾವೇರಿ, ಧಾರವಾಡ, ಬೆಳಗಾವಿ, ಚಿಕ್ಕೋಡಿ, ಉತ್ತರಕನ್ನಡ ಲೋಕಸಭಾ ಕ್ಷೇತ್ರಗಳಿಗೆ ಮೇ 7 ರಂದು ಮತದಾನ ನಡೆಯಲಿದೆ.


Spread the love

About Laxminews 24x7

Check Also

ಆನ್‌ಲೈನ್ ಗೇಮಿಂಗ್ ಪ್ರಚಾರ-ನಿಯಂತ್ರಣ ಕಾಯಿದೆ ಪ್ರಶ್ನಿಸಿ ಹೈಕೋರ್ಟ್​ಗೆ ಅರ್ಜಿ: ಆ.30ಕ್ಕೆ ವಿಚಾರಣೆ

Spread the love ಬೆಂಗಳೂರು: ಹಣವನ್ನು ಪಣಕ್ಕಿಟ್ಟು ಆಡುವಂತಹ ಆನ್‌ಲೈನ್​ ಗೇಮ್​ಗಳಿಗೆ ನಿಷೇಧ ಹೇರುವುದಕ್ಕೆ ಅವಕಾಶ ಕಲ್ಪಿಸುವ ಆನ್‌ಲೈನ್ ಗೇಮಿಂಗ್ ಪ್ರಚಾರ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ