Breaking News

ಮತದಾರರಿಗೆ ಹಂಚಲು ಕೊಟ್ಟಿದ್ದ ಹಣ ತಲುಪದ ಕಾರಣ ಸೋತೆ: ಎಂಟಿಬಿ ನಾಗರಾಜ್

Spread the love

ಹೊಸಕೋಟೆ: ‘ಕಳೆದ ವಿಧಾನಸಭಾ ಚುನಾವಣೆಯಲ್ಲಿ ನನ್ನ ಸೋಲಿಗೆ ಹಲವು ಕಾರಣಗಳಿರಬಹುದು. ಆದರೆ, ಮತದಾರರಿಗೆ ಹಂಚಲು ಕೊಟ್ಟಿದ್ದ ಹಣ ಸರಿಯಾಗಿ ಹಂಚಿಕೆಯಾಗಲಿಲ್ಲ. ಹಾಗಾಗಿ ನಾನು ಸೋಲಬೇಕಾಯಿತು’ ಎಂದು ವಿಧಾನ ಪರಿಷತ್ ಸದಸ್ಯ ಎಂ.ಟಿ.ಬಿ ನಾಗರಾಜ್ ಹೇಳಿದ್ದಾರೆ.

 

ಬಿಜೆಪಿ ಕಚೇರಿಯಲ್ಲಿ ಗುರುವಾರ ನಡೆದ ಬೂತ್ ಮಟ್ಟದ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ‘ಮತದಾರರಿಗೆ ಹಂಚಿಕೆಯಾಗಬೇಕಿದ್ದ ಹಣ ಅವರನ್ನು ತಲುಪಿಲ್ಲ ಎಂಬ ಕುರಿತು ನನಗೆ ಹಲವು ದೂರು ಬಂದಿದ್ದವು.ಈ ಲೋಕಸಭಾ ಚುನಾವಣೆಯಲ್ಲಿ ಹಾಗೇ ಆಗುವುದು ಬೇಡ’ ಎಂದರು.

 

‘ವಿಧಾನಸಭಾ ಚುನಾವಣೆಯಲ್ಲಿ ನಮ್ಮ ಪಕ್ಷದ ಹಲವು ಮುಖಂಡರ ಸ್ವಯಂಕೃತ ಅಪರಾಧವೂ ನನ್ನ ಸೋಲಿಗೆ ಕಾರಣ. ಸಮಯದ ಕೊರತೆಯಿಂದ ಪ್ರಚಾರ ಕೈಗೊಳ್ಳಲು ಸಾಧ್ಯವಾಗಲಿಲ್ಲ’ ಎಂದು ಬಹಿರಂಗವಾಗಿ ಅಸಮಾಧಾನ ವ್ಯಕ್ತಪಡಿಸಿದರು.


Spread the love

About Laxminews 24x7

Check Also

ಏಪ್ರಿಲ್‌ಗೆ ಜಿಬಿಎ, ಸ್ಥಳೀಯ ಸಂಸ್ಥೆ ಚುನಾವಣೆ ಸಿದ್ಧತೆಗೆ ಜಿಲ್ಲಾಧಿಕಾರಿಗಳಿಗೆ ಆಯೋಗ ಸೂಚನೆ

Spread the loveಬೆಂಗಳೂರು:ಕಳೆದ ನಾಲ್ಕೈದು ವರ್ಷಗಳಿಂದ ಒಂದಿಲ್ಲೊಂದು ಕಾರಣಗಳಿಂದ ಪದೇ ಪದೇ ಮುಂದೂಡಲಾಗಿದ್ದ ಕರ್ನಾಟಕ ಸ್ಥಳೀಯ ಸಂಸ್ಥೆಗಳ ಚುನಾವಣೆಯು ಮುಂಬರುವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ