Breaking News

ಇಂದು ನಾಮಪತ್ರ ಸಲ್ಲಿಕೆ, ಯಾವುದೇ ಕಾರಣಕ್ಕೂ ಹಿಂದೆ ಸರಿಯಲ್ಲ: ಈಶ್ವರಪ್ಪ

Spread the love

ಶಿವಮೊಗ್ಗ: ಏ.12ರಂದು ನಾಮಪತ್ರ ಸಲ್ಲಿಸುತ್ತೇನೆ. ಯಾವುದೇ ಕಾರಣಕ್ಕೂ ಹಿಂದೆ ಸರಿಯುವುದಿಲ್ಲ ಎಂದು ಮಾಜಿ ಡಿಸಿಎಂ ಕೆ.ಎಸ್‌.ಈಶ್ವರಪ್ಪ ಹೇಳಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಠೇವಣಿ ಹಣವಾಗಿ ನಗರದ ಮಹಿಳೆಯರು ಮತ್ತು ಮುತ್ತೆçದೆಯರು ಸೇರಿ 24 ಸಾವಿರ ರೂ.ಮತ್ತು ತೀರ್ಥಹಳ್ಳಿಯ ಭೀಮನಕಟ್ಟೆ ಮಠದ ಶ್ರೀಗಳು 1 ಸಾವಿರ ರೂ. ನೀಡಿ ಹರಿಸಿದ್ದಾರೆ. ನಾಮಪತ್ರದ ಸಲ್ಲಿಕೆಗೆ ಆಗಮಿಸಲು ಯಾವ ದೊಡ್ಡ ನಾಯಕರೂ ನನಗಿಲ್ಲ. ಸಾಮಾನ್ಯ ಕಾರ್ಯಕರ್ತರೇ ನನ್ನ ಸ್ಟಾರ್‌ ಪ್ರಚಾರಕರು.

 

ಹಿಂದೂ ಭಕ್ತನಿಗೆ ರಾಷ್ಟ್ರಭಕ್ತ ಮುಸಲ್ಮಾನರು ಖಂಡಿತವಾಗಿಯೂ ಮತ ಹಾಕುತ್ತಾರೆ. ನಾನು ನರೇಂದ್ರ ಮೋದಿ ಫೋಟೋ ಹಾಕಬಾರದು ಎಂದು ಹೇಳುವ ಇವರು ಯಡಿಯೂರಪ್ಪ, ರಾಘವೇಂದ್ರ ಮತ್ತು ವಿಜಯೇಂದ್ರ ಫೋಟೋ ಇಟ್ಟುಕೊಂಡು ಹೋಗಿ ಚುನಾವಣೆಯಲ್ಲಿ ಗೆಲ್ಲಲಿ ನೋಡೋಣ. ಮೋದಿ ವಿಶ್ವನಾಯಕ. ಅವರ ಫೋಟೋ ಹಾಕಬಾರದು ಎಂದು ಹೇಳಲು ಇವರ್ಯಾರು ಎಂದು ಪ್ರಶ್ನಿಸಿದರು.


Spread the love

About Laxminews 24x7

Check Also

ಸಾರ್ವಜನಿಕ ಸ್ಥಳಗಳಲ್ಲಿ ಅನುಮತಿ ಕಡ್ಡಾಯಕ್ಕೆ ತಡೆಯಾಜ್ಞೆ ಪ್ರಶ್ನಿಸಿ ಅರ್ಜಿ: ತೀರ್ಪು ಕಾಯ್ದಿರಿಸಿದ ಹೈಕೋರ್ಟ್

Spread the loveಧಾರವಾಡ: ಸಾರ್ವಜನಿಕ ಸ್ಥಳದಲ್ಲಿ ಖಾಸಗಿ ಸಂಸ್ಥೆಗಳ ಅನುಮತಿ ಕಡ್ಡಾಯ ಆದೇಶಕ್ಕೆ ತಡೆಯಾಜ್ಞೆ ನೀಡಿದ್ದ ಧಾರವಾಡ ಹೈಕೋರ್ಟ್ ಏಕ ಸದಸ್ಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ