Breaking News

ಧಾರವಾಡ, ಬೆಳಗಾವಿ, ವಿಜಯನಗರ ಜಿಲ್ಲೆಗಳಲ್ಲಿ ಉತ್ತಮ ಮಳೆ

Spread the love

ಧಾರವಾಡ, ಬೆಳಗಾವಿ ಮತ್ತು ವಿಜಯನಗರ ಜಿಲ್ಲೆಯ ವಿವಿಧೆಡೆ ಬುಧವಾರ ಸಂಜೆ ಉತ್ತಮ ಮಳೆಯಾಯಿತು.

ಹುಬ್ಬಳ್ಳಿ ನಗರ ಸೇರಿ ಧಾರವಾಡ ಜಿಲ್ಲೆ ವ್ಯಾಪ್ತಿಯ ಕಲಘಟಗಿ, ನವಲಗುಂದ, ಕುಂದಗೋಳ ಭಾಗದಲ್ಲಿ ಮಳೆಯಾಯಿತು. ಜೋರಾಗಿ ಮಳೆಯಾದ ಪರಿಣಾಮ ಹುಬ್ಬಳ್ಳಿಯ ಬಹುತೇಕ ಕಡೆ ವಾಹನಗಳ ಸುಗಮ ಸಂಚಾರಕ್ಕೆ ತೊಂದರೆಯಾಯಿತು.

ಧಾರವಾಡ, ಬೆಳಗಾವಿ, ವಿಜಯನಗರ ಜಿಲ್ಲೆಗಳಲ್ಲಿ ಉತ್ತಮ ಮಳೆ

ಕೆಲ ಕಡೆ ಮರಗಳು ಉರುಳಿ ಬಿದ್ದವು. ಅಲ್ಲಲ್ಲಿ ವಿದ್ಯುತ್ ಪೂರೈಕೆ ಕಡಿತಗೊಳಿಸಲಾಯಿತು.

ಬೆಳಗಾವಿ ಜಿಲ್ಲೆಯ ಹುಕ್ಕೇರಿ, ಸಂಕೇಶ್ವರ ಹಾಗೂ ಯಮಕನಮರಡಿ ಭಾಗದಲ್ಲಿ ಒಂದು ಗಂಟೆಗೂ ಹೆಚ್ಚು ಹೊತ್ತು ಉತ್ತಮ ಮಳೆ ಸುರಿಯಿತು. ಬೆಳಗಾವಿ ನಗರ, ತಾಲ್ಲೂಕಿನಲ್ಲಿ ತುಂತುರು ಮಳೆ ಸುರಿಯಿತು.

ವಿಜಯನಗರ ಜಿಲ್ಲೆ ಹರಪನಹಳ್ಳಿ ತಾಲ್ಲೂಕಿನ ಅರಸೀಕೆರೆ ಹೋಬಳಿ ವ್ಯಾಪ್ತಿಯಲ್ಲಿ ಗುಡುಗು, ಸಿಡಿಲು ಸಹಿತ ಮಳೆ ಸುರಿಯಿತು. ಅರಸೀಕೆರೆ, ಹೊಸಕೋಟೆ, ಕಣಬಘಟ್ಟ, ಅಣಜಿಗೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸಾಧಾರಣ ಮಳೆಯಾಗಿದೆ. ಉಚ್ಚಂಗಿದುರ್ಗ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ತುಂತುರು ಮಳೆಯಾಯಿತು.


Spread the love

About Laxminews 24x7

Check Also

ಗಣೇಶ ವಿಸರ್ಜನೆ ಮತ್ತು ಈದ್ ಮಿಲಾದ್’ನಲ್ಲಿ ಶಾಂತಿ ಕದಡಿದ್ರೇ ಹುಷಾರ್…

Spread the love ಗಣೇಶ ವಿಸರ್ಜನೆ ಮತ್ತು ಈದ್ ಮಿಲಾದ್’ನಲ್ಲಿ ಶಾಂತಿ ಕದಡಿದ್ರೇ ಹುಷಾರ್… ಕಠಿಣ ಕ್ರಮ ಕೈಗೊಳ್ಳುವ ಎಚ್ಚರಿಕೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ