Breaking News

₹9.50 ಲಕ್ಷ ಮೌಲ್ಯದ ಚಿನ್ನಾಭರಣ ವಶ, ಆರೋಪಿ ಬಂಧನ

Spread the love

ಹುಬ್ಬಳ್ಳಿ: ಗೋಕುಲ ಬಸ್‌ ನಿಲ್ದಾಣದಲ್ಲಿ ಮಹಿಳೆಯೊಬ್ಬರ ವ್ಯಾನಿಟಿ ಬ್ಯಾಗ್‌ನಲ್ಲಿದ್ದ ಚಿನ್ನಾಭರಣ ಕಳವು ಮಾಡಿದ್ದ ಆರೋಪಿ ಮಹಿಳೆಯನ್ನು ಗೋಕುಲ ಠಾಣೆ ಪೊಲೀಸರು ಬಂಧಿಸಿ, ₹9.50 ಲಕ್ಷ ಮೌಲ್ಯದ ಚಿನ್ನಾಭರಣ ವಶಪಡಿಸಿಕೊಂಡಿದ್ದಾರೆ.

ತಮಿಳುನಾಡಿನ ಕುಪ್ಪಂ ನಿವಾಸಿ ಸಂಧ್ಯಾ ಬಂಧಿತ ಆರೋಪಿ.ಬಸ್‌ ನಿಲ್ದಾಣದ ಪ್ಲಾಟ್‌ಫಾರ್ಮ್‌ 4ರ ಬಳಿ ಜನವರಿ 5ರಂದು ಮಹಿಳೆ ಬಸ್‌ ಹತ್ತುವಾಗ, ಆರೋಪಿ ಅವರ ವ್ಯಾನಿಟಿ ಬ್ಯಾಗ್‌ನಲ್ಲಿದ್ದ 139 ಗ್ರಾಂ ಚಿನ್ನಾಭರಣ ಕಳವು ಮಾಡಿದ್ದಳು. ಗೋಕುಲ ರೋಡ್‌ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ನಿಲ್ದಾಣದ ಬಳಿಯಿರುವ ಸಿಸಿಟಿವಿ ಕ್ಯಾಮೆರಾಗಳನ್ನು ಪರಿಶೀಲನೆ ನಡೆಸಿದ ಪೊಲೀಸರಿಗೆ, ಆರೋಪಿಯ ಮುಖಚಹರೆ ಪತ್ತೆಯಾಗಿತ್ತು. ತಮಿಳುನಾಡಿನವಳು ಎನ್ನುವ ಖಚಿತ ಮಾಹಿತಿ ಆಧರಿಸಿದ ಇನ್‌ಸ್ಪೆಕ್ಟರ್‌ ಪ್ರವೀಣ ನೀಲಮ್ಮನವರ ನೇತೃತ್ವದ ತಂಡ ಕಾರ್ಯಾಚರಣೆ ನಡೆಸಿತ್ತು.

 


Spread the love

About Laxminews 24x7

Check Also

ಗೌರಿ ಹುಣ್ಣಿಮೆಯಿಂದ ಛಟ್ಟಿ ಅಮವಾಸ್ಯೆವರೆಗೆ ಶ್ರೀಕ್ಷೇತ್ರ ಯಲ್ಲಮ್ಮನಗುಡ್ಡಕ್ಕೆ ಹುಬ್ಬಳ್ಳಿಯಿಂದ ವಿಶೇಷ ಬಸ್​ ವ್ಯವಸ್ಥೆ

Spread the love ಹುಬ್ಬಳ್ಳಿ: ಬೆಳಗಾವಿ ಜಿಲ್ಲೆಯ ಸವದತ್ತಿ ರೇಣುಕಾ ಯಲ್ಲಮ್ಮದೇವಿ ದರ್ಶನ ತೆರಳುವ ಭಕ್ತಾದಿಗಳು ಹಾಗೂ ಸಾರ್ವಜನಿಕರ ಅನುಕೂಲಕ್ಕಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ