ನವದೆಹಲಿ: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಮತದಾರರನ್ನು ಸೆಳೆಯುವ ನಿಟ್ಟಿನಲ್ಲಿ ಈಗಾಗಲೇ ಕಾಂಗ್ರೆಸ್ ಹಲವು ಅಂಶಗಳ ಪ್ರಣಾಳಿಕೆ ಬಿಡುಗಡೆ ಮಾಡಿದೆ. ಇದರ ಬೆನ್ನಲ್ಲೇ ಇದೀಗ ಬಿಜೆಪಿ ಕೂಡ ಚುನಾವಣಾ ಪ್ರಣಾಳಿಕೆ ಬಿಡುಗಡೆ ಮಾಡಿದೆ.

ನವದೆಹಲಿಯ ಬಿಜೆಪಿ ಕೇಂದ್ರ ಕಚೇರಿಯಲ್ಲಿ ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ.ನಡ್ಡಾ, ಕೇಂದ್ರ ಗೃಹ ಸಚಿವ ಅಮಿತ್ ಶಾ, ‘ಸಂಕಲ್ಪ ಪತ್ರ’ ಹೆಸರಿನ ಬಿಜೆಪಿ ಪ್ರಣಾಳಿಕೆ ಬಿಡುಗಡೆ ಮಾಡಿದರು.
ಈ ವೇಳೆ ರಕ್ಷಣ ಅಸಚಿವ ರಾಜ್ ನಾಥ್ ಸಿಂಗ್, ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ್, ಕೇಂದ್ರ ಸಚಿವ ಅಶ್ವಿನಿ ವೈಷ್ಣವ್, ಜೈಶಂಕರ್ ರ್ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಈ ವೇಳೆ ಕೇಂದ್ರದ ಯೋಜನೆಗಳ ಫಲಾನುಭವಿಗಳಿಗೆ ಪ್ರಧಾನಿ ನರೇಂದ್ರ ಮೋದಿ, ಪ್ರಣಾಳಿಕೆಯ ಮೊದಲ ಪುಸ್ತಕಗಳನ್ನು ನೀಡಿದರು.
Laxmi News 24×7