ಮೈಸೂರು: ರಾಜ್ಯದಲ್ಲಿ ಲೋಕಸಭಾ ಚುನಾವಣೆಯ (Lok sabha Election 2024) ಕಾವು ಏರುತ್ತಿದ್ದು, ಇಂದು ಸಿಎಂ ಸಿದ್ದರಾಮಯ್ಯ (CM Siddaramaiah) ತವರು ಜಿಲ್ಲೆ ಮೈಸೂರು (Mysuru) ಲೋಕಸಭಾ ಅಖಾಡಕ್ಕೆ ಪ್ರಧಾನಿ ಮೋದಿ (PM Narendra Modi) ಎಂಟ್ರಿ ಕೊಡಲಿದ್ದಾರೆ.
ಮೈಸೂರು ಹಾಗೂ ಮಂಗಳೂರಿನಲ್ಲಿ ಬಿಜೆಪಿ ಪರ ಪ್ರಚಾರ ನಡೆಸಲಿದ್ದಾರೆ. ಪ್ರಧಾನಿ ಮೋದಿ ಇಂದಿನ ಮೈಸೂರು ಪ್ರವಾಸದ ಸಮಯ ಬದಲಾವಣೆ ಆಗಿದೆ. ಸುಮಾರು ಒಂದು ಗಂಟೆ ತಡವಾಗಿ ಮೈಸೂರಿಗೆ ಆಗಮಿಸಲಿರುವ ಪ್ರಧಾನಿ ಮೋದಿ, ಸಂಜೆ ನಾಲ್ಕು ಗಂಟೆ ಬದಲಾಗಿ ಸಂಜೆ 5:15ಕ್ಕೆ ಮೈಸೂರಿಗೆ ಆಗಮಿಸಲಿದ್ದಾರೆ. ಭೋಪಾಲ್ ಏರ್‌ಪೋರ್ಟ್‌ನಿಂದ (Bhopal Airport) ಮೈಸೂರು ಏರ್‌ಪೋರ್ಟ್‌ಗೆ ಬಂದಿಳಿಯಲಿರುವ ಪ್ರಧಾನಿ, ಮೈಸೂರಿನ ಮಂಡಕಳ್ಳಿ ವಿಮಾನ ನಿಲ್ದಾಣದಿಂದ ಹೆಲಿಕಾಪ್ಟರ್ ಮೂಲಕ ವಿಶೇಷ ಹೆಲಿಪ್ಯಾಡ್‌ಗೆ ಬರಲಿದ್ದಾರೆ. ಮೈಸೂರಿನ ಸಮಾವೇಶದಲ್ಲಿ ಪ್ರಧಾನಿ ಮೋದಿ ಹಾಗೂ ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡರು (HD Devegowda) ಒಂದೇ ವೇದಿಕೆ ಹಂಚಿಕೊಳ್ಳಲಿದ್ದಾರೆ.