Breaking News

ನಿಪ್ಪಾಣಿಯಲ್ಲಿರುವ ನೂತನ ಪ್ರವಾಸಿ ಮಂದಿರದ ಉದ್ಘಾಟನಾ ಸಮಾರಂಭ

Spread the love

ಬೆಳಗಾವಿ: ನಿಯಮಗಳನ್ನು ಪಾಲಿಸಿ ಜನರಿಗೆ ಮಾದರಿಯಾಗಬೇಕಿರುವ ನಮ್ಮ ನಾಯಕರು ನಿಯಮಗಳನ್ನು ಮುರಿಯುತ್ತಿದ್ದಾರೆ. ಇಂಥದ್ದೇ ಒಂದು ಘಟನೆ ಜಿಲ್ಲೆಯ ನಿಪ್ಪಾಣಿಯಲ್ಲಿ ನಡೆದಿದೆ.

ನಿಪ್ಪಾಣಿಯಲ್ಲಿರುವ ನೂತನ ಪ್ರವಾಸಿ ಮಂದಿರದ ಉದ್ಘಾಟನಾ ಸಮಾರಂಭದಲ್ಲಿ ಇಂದು ಉಪಮುಖ್ಯಮಂತ್ರಿಗಳಾದ ಲಕ್ಷ್ಮಣ ಸವದಿ ಹಾಗೂ ಗೋವಿಂದ ಕಾರಜೋಳ ಪಾಲ್ಗೊಂಡಿದ್ದರು. ಸಚಿವೆ ಶಶಿಕಲಾ ಜೊಲ್ಲೆ ಹಾಗೂ ಸಂಸದ ಅಣ್ಣಾಸಾಹೇಬ್​ ಜೊಲ್ಲೆ ಸಹ ಉಪಸ್ಥಿತರಿದ್ದರು.

ಇದೇ ವೇಳೆ ಸಮಾರಂಭದಲ್ಲಿ ಅಧಿಕಾರಿಗಳು ಸೇರಿದಂತೆ 100ಕ್ಕೂ ಹೆಚ್ಚು ಜನರು ಸಹ ಭಾಗಿಯಾಗಿದ್ದರು. ಜೊತೆಗೆ, ಸಾಮಾಜಿಕ ಅಂತರವನ್ನೂ ಸಹ ಪಾಲಿಸಲಿಲ್ಲ. ಹಾಗಾಗಿ, ಜನರಿಗೆ ನಿಯಮಗಳನ್ನು ಪಾಲಿಸಲು ಕಿವಿಮಾತು ಹೇಳುವ ನಾಯಕರೇ ನಿಯಮಗಳನ್ನು ಮುರಿಯುವುದು ಎಷ್ಟು ಸರಿ ಎಂದು ಸ್ಥಳೀಯರು ಪ್ರಶ್ನಿಸಿದ್ದಾರೆ.


Spread the love

About Laxminews 24x7

Check Also

ಕೃಷಿ ಕ್ಷೇತ್ರದಲ್ಲಿನ ಮಕ್ಕಳ ಬಳಕೆ ಕುರಿತ ಅಧ್ಯಯನದ ಪೂರ್ವಭಾವಿ ಸಭೆ

Spread the loveಬೆಳಗಾವಿ: ನವದೆಹಲಿಯ ಅಂತಾರಾಷ್ಟ್ರೀಯ ಕಾರ್ಮಿಕ ಸಂಸ್ಥೆಯು ಕೃಷಿ ಕ್ಷೇತ್ರದಲ್ಲಿನ ಮಕ್ಕಳ ಬಳಕೆ ಕುರಿತ ಅಧ್ಯಯನಕ್ಕಾಗಿ ಬೆಳಗಾವಿ ಜಿಲ್ಲೆಯನ್ನು ಪ್ರಾಯೋಗಿಕವಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ