Breaking News

ನಿಗಮ ಸ್ಥಾಪನೆಗೆ ಬದಲು ಆರ್ಥಿಕವಾಗಿ ಹಿಂದುಳಿದವರಿಗೆ ಹೆಚ್ಚು ಒತ್ತು ಕೊಡುವ ಕೆಲಸವನ್ನು ಸರ್ಕಾರ ಮಾಡಿದರೆ ಒಳ್ಳೆಯದು:ಶ್ರೀ ಸಿದ್ದಲಿಂಗ ಸ್ವಾಮೀಜಿ

Spread the love

ತುಮಕೂರು: ಎಲ್ಲ ಜಾತಿಯಲ್ಲೂ ಹಿಂದುಳಿದವರಿದ್ದಾರೆ. ಎಲ್ಲ ಸಮಾಜದಲ್ಲಿಯೂ ಕಡುಬವರು ಇದ್ದಾರೆ. ನಿಗಮ ಸ್ಥಾಪನೆಗೆ ಬದಲು ಆರ್ಥಿಕವಾಗಿ ಹಿಂದುಳಿದವರಿಗೆ ಹೆಚ್ಚು ಒತ್ತು ಕೊಡುವ ಕೆಲಸವನ್ನು ಸರ್ಕಾರ ಮಾಡಿದರೆ ಒಳ್ಳೆಯದು ಎಂದು ಸಿದ್ಧಗಂಗಾ ಮಠಾಧ್ಯಕ್ಷ ಶ್ರೀ ಸಿದ್ದಲಿಂಗ ಸ್ವಾಮೀಜಿ ಅಸಮಾಧಾನ ಹೊರಹಾಕಿದ್ದಾರೆ.

ವೀರಶೈವ-ಲಿಂಗಾಯತ ಅಭಿವೃದ್ಧಿ ನಿಗಮ ಸ್ಥಾಪನೆ ರಚನೆ ಮಾಡ್ತಿರೋ ವಿಚಾರ ಕೇಳಿ ನನಗೆ ಆಶ್ಚರ್ಯ ಎನಿಸುತ್ತದೆ. ಜಾತಿಗೊಂದು ನಿಗಮ, ಪ್ರಾಧಿಕಾರ ಮಾಡುತ್ತಾ ಹೋದರೆ ಅದಕ್ಕೆ ಮಿತಿನೇ ಇರಲ್ಲ ಸರ್ಕಾರ ಇರೋದು ಸಮಗ್ರ ರಾಜ್ಯದ ಅಭಿವೃದ್ಧಿಗಾಗಿ. ಆರ್ಥಿಕವಾಗಿ ಹಿಂದುಳಿದವರಿಗೆ ಉದ್ಯೋಗದಲ್ಲಿ ಅವಕಾಶ ಕೊಡುವ ವ್ಯವಸ್ಥೆ ಕಲ್ಪಿಸಿ ಕೊಟ್ಟರೆ ತುಂಬಾ ಸಂತೋಷ. ಒಂದು ಜಾತಿಗಾಗಿ ಪ್ರಾಧಿಕಾರ ಮಾಡಿದರೆ ಮುಂದೆ ಪ್ರತಿಯೊಬ್ಬರೂ ಕೇಳುತ್ತಾರೆ. ಇದು ಸಹಜ ಆಗುತ್ತೆ ಎಂದು ಶ್ರೀಗಳು ಸರ್ಕಾರಕ್ಕೆ ಸಲಹೆ ನೀಡಿದ್ದಾರೆ.

ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮ ಸ್ಥಾಪನೆಗೆ ಮಂಗಳವಾರ ಆದೇಶ ಹೊರಡಿಸಿರುವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ರಾಜ್ಯದಲ್ಲಿ ವೀರಶೈವ ಲಿಂಗಾಯತ ಸಮುದಾಯದ ಜನಸಂಖ್ಯೆ ಹೆಚ್ಚಾಗಿದೆ. ಇವರಲ್ಲಿ ಆರ್ಥಿಕ, ಸಾಮಾಜಿಕ ಹಾಗೂ ಶೈಕ್ಷಣಿಕವಾಗಿ ಅತ್ಯಂತ ಹಿಂದುಳಿದವರಿದ್ದು, ಸಮುದಾಯದ ಸರ್ವತೋಮುಖ ಅಭಿವೃದ್ಧಿಗಾಗಿ ನಿಗಮ ಸ್ಥಾಪಿಸಲಾಗುತ್ತಿದೆ ಎಂದಿದ್ದರು. ಈ ಸಂಬಂಧ ರಾಜ್ಯದಾದ್ಯಂತ ಬಹುತೇಕ ಮಠಾಧೀಶರು, ಗಣ್ಯರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.


Spread the love

About Laxminews 24x7

Check Also

ಕುಪ್ಪಟಗಿರಿ ಕ್ರಾಸ್ ಬಳಿ ಹೊಸ ಟ್ರಾನ್ಸ್’ಫಾರ್ಮರ್ ಲೋಕಾರ್ಪಣೆಗೊಳಿಸಿದ ಮಾಜಿ ಶಾಸಕ ಅರವಿಂದ ಪಾಟೀಲ್

Spread the love ಕುಪ್ಪಟಗಿರಿ ಕ್ರಾಸ್ ಬಳಿ ಹೊಸ ಟ್ರಾನ್ಸ್’ಫಾರ್ಮರ್ ಲೋಕಾರ್ಪಣೆಗೊಳಿಸಿದ ಮಾಜಿ ಶಾಸಕ ಅರವಿಂದ ಪಾಟೀಲ್ ಖಾನಾಪೂರ ತಾಲೂಕಿನ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ