Breaking News

ಮಟನ್ ಚೀಟಿ ಹೆಸರಿನಲ್ಲಿ ಮಕ್ಮಲ್ ಟೋಪಿ ಹಾಕಿದ್ದ ಆರೋಪಿ ಅರೆಸ್ಟ್, ಮನೆ ಜಪ್ತಿ!

Spread the love

ಬೆಂಗಳೂರು:- ಹೊಸ ತೊಡಕಿಗೆ ಮಟನ್ ಚೀಟಿ ಹೆಸರಲ್ಲಿ ಮೋಸ ಮಾಡಿದ ಆರೋಪಿಯ ಮನೆ ಜಪ್ತಿ ಮಾಡಲಾಗಿದೆ. ಪುಟ್ಟಸ್ವಾಮಿಗೌಡ ಬಂಧಿತ ಆರೋಪಿ.

 

ಆರೋಪಿಯು ಯುಗಾದಿ ಹಬ್ಬದ ಹೊಸ ತೊಡಕಿಗೆ ಮಟನ್ ಚೀಟಿ ಹೆಸರಿನಲ್ಲಿ ಹಣ ಪಡೆದು ವಂಚಿಸಿದ್ದ.

ಮಟನ್ ಚೀಟಿ ಹೆಸರಿನಲ್ಲಿ ಮಕ್ಮಲ್ ಟೋಪಿ ಹಾಕಿದ್ದ ಆರೋಪಿ ಅರೆಸ್ಟ್, ಮನೆ ಜಪ್ತಿ!

ಈ ಸಂಬಂಧ ಈತನ ಮೇಲೆ ಹಲವು ಪ್ರಕರಣ ದಾಖಲಾಗಿದವು. ಇದೀಗ ಆರೋಪಿಯನ್ನು ಬಂಧಿಸಿರುವ ಪೊಲೀಸರು, ಪುಟ್ಟಸ್ವಾಮಿಗೌಡ ಮನೆಯನ್ನು ಸುಪರ್ದಿಗೆ ಪಡೆದಿದ್ದು, ಈತ ಸಂಗ್ರಹಿಸಿದ ಹಣದಲ್ಲಿ ತನ್ನ ಸಾಲ ತೀರಿಸಿರುವುದು ಪೊಲೀಸ್ ತನಿಖೆಯಲ್ಲಿ ತಿಳಿದು ಬಂದಿದೆ.

ಬ್ಯಾಟರಾಯನಪುರ ಠಾಣಾ ಪೊಲೀಸರ ತನಿಖೆ ವೇಳೆ ಪುಟ್ಟಸ್ವಾಮಿಗೌಡನ ಖಾತೆಯಲ್ಲಿ ಸಾವಿರಕ್ಕಿಂತಲೂ ಕಡಿಮೆ ಹಣವಷ್ಟೇ ಇರುವುದು ತಿಳಿದುಬಂದಿದೆ. ಅಲ್ಲದೆ ಸಿಕ್ಕಾಪಟ್ಟೆ ಸಾಲ ಮಾಡಿಕೊಂಡಿದ್ದ ಆರೋಪಿ, ಜನರಿಂದ ಪಡೆದ ಲಕ್ಷಾಂತರ ರೂ. ಹಣದಿಂದಲೇ ತನ್ನ ಸಾಲ‌ ತೀರಿಸಿದ್ದಾನಂತೆ. ಆದರೆ ಚೀಟಿ ಹಣ ಮರಳಿಸಲು ಪುನಃ ಸಾಲ ಸಿಗದಿದ್ದಾಗ ನಾಪತ್ತೆಯಾಗಿದ್ದ ಎಂದು ತಿಳಿದು ಬಂದಿದೆ.

ಸದ್ಯ ಆರೋಪಿಯ ಮನೆಯನ್ನು ಪೊಲೀಸರು ತಮ್ಮ ಸುಪರ್ದಿಗೆ ಪಡೆದಿದ್ದು, ಮನೆಯ ಮೇಲೆ ಸಹ ಪುಟ್ಟಸ್ವಾಮಿಗೌಡ ಬ್ಯಾಂಕ್​ ಲೋನ್​ ಪಡೆದಿದ್ದು ಇನ್ನೂ 80 ಲಕ್ಷ ಸಾಲ ಬಾಕಿಯಿರುವುದು ತಿಳಿದು ಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ.


Spread the love

About Laxminews 24x7

Check Also

5 ಹುಲಿಗಳು ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಅರಣ್ಯಾಧಿಕಾರಿಗಳಿಗೆ ಕಡ್ಡಾಯ ರಜೆ ನೀಡಿ ಪಿಸಿಸಿಎಫ್ ಆದೇಶಿಸಿದ್ದಾರೆ.

Spread the loveಚಾಮರಾಜನಗರ: ಮಲೆಮಹದೇಶ್ವರ ವನ್ಯಜೀವಿಧಾಮದ ಮೀಣ್ಯಂ ಅರಣ್ಯದಲ್ಲಿ 5 ಹುಲಿಗಳು ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಅರಣ್ಯಾಧಿಕಾರಿಗಳಿಗೆ ಕಡ್ಡಾಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ