ಬೆಳಗಾವಿ: ಇಲ್ಲಿನ ಜಿಲ್ಲಾಧಿಕಾರಿ ಕಚೇರಿಯಲ್ಲಿ ಬೆಳಗಾವಿ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಮೃಣಾಲ್ ಹೆಬ್ಬಾಳಕರ ಸೋಮವಾರ ಚುನಾವಣಾಧಿಕಾರಿ ನಿತೇಶ್ ಪಾಟೀಲ ಅವರಿಗೆ ನಾಮಪತ್ರ ಸಲ್ಲಿಸಿದರು.

ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮಿ ಹೆಬ್ಬಾಳಕರ, ಶಾಸಕರಾದ ಲಕ್ಷ್ಮಣ ಸವದಿ, ಮಹಾಂತೇಶ ಕೌಜಲಗಿ, ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ, ಬಾಗಣ್ಣ ನರೋಟಿ ಇದ್ದರು.
Laxmi News 24×7