Breaking News

ಶೋಷಿತ ವರ್ಗಕ್ಕೆ ನ್ಯಾಯ ನೀಡಿದ ಅಂಬೇಡ್ಕರ್’

Spread the love

ನೇಸರಗಿ: ಅಸ್ಪೃಶ್ಯತೆ ಮತ್ತು ಅಸಮಾನತೆಯ ಆಂದೋಲನ ಪ್ರಾರಂಭಿಸಿ ಶೋಷಿತ ವರ್ಗಕ್ಕೆ ನ್ಯಾಯ ಒದಗಿಸಿದವರು ಬಿ.ಆರ್. ಅಂಬೇಡ್ಕರ್ ಎಂದು ಜೈ ಭೀಮ ಸಂಘರ್ಷ ಸಮಿತಿ ರಾಜ್ಯಾಧ್ಯಕ್ಷ ರಮೇಶ ರಾಯಪ್ಪಗೋಳ ಹೇಳಿದರು.

'ಶೋಷಿತ ವರ್ಗಕ್ಕೆ ನ್ಯಾಯ ನೀಡಿದ ಅಂಬೇಡ್ಕರ್'

ಗ್ರಾಮದ ದುರ್ಗಾದೇವಿ ದೇವಸ್ಥಾನದಲ್ಲಿ ಆಯೋಜಿಸಿದ ಬಿ.ಆರ್.ಅಂಬೇಡ್ಕರ್ ಜಯಂತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

‘ಅಂಬೇಡ್ಕರ್ ಅವರ ಬದುಕು ಎಲ್ಲರಿಗೂ ಸ್ಫೂರ್ತಿ. ಸಮಾನತೆ, ಪ್ರಗತಿಯ ಕನಸು ಕಂಡ ಮೇರು ನಾಯಕರಾಗಿದ್ದರು’ ಎಂದರು.

ಈ ಸಂದರ್ಭದಲ್ಲಿ ರುದ್ರಪ್ಪ ರಾಯಪ್ಪಗೋಳ, ಶ್ರೀನಿವಾಸ ಹಮ್ಮನ್ನವರ, ಯಲ್ಲಪ್ಪ ಹಮ್ಮನ್ನವರ, ರಾಘು ಮದೇನ್ನವರ, ಈಶ್ವರ ಮಾಳಗಿ, ವಿನೋದ ರಾಯಪ್ಪಗೋಳ, ಮನೋಜ ಮಾಳಗಿ, ವಿನಾಯಕ ರಾಯಪ್ಪಗೋಳ, ಮಂಜುನಾಥ ರಾಯಪ್ಪಗೋಳ, ಗೌತಮ್ ರಾಯಪ್ಪಗೋಳ, ಪ್ರಕಾಶ ಕೆಳಗಿನಮನಿ ಇದ್ದರು.


Spread the love

About Laxminews 24x7

Check Also

ಬಂಗಾರ ಪ್ರಿಯರಿಗೆ ಗುಡ್‌ ನ್ಯೂಸ್‌ – 10 ಗ್ರಾಂ ಚಿನ್ನದ ಬೆಲೆ 2,900 ರೂ. ಇಳಿಕೆ

Spread the loveಬೆಂಗಳೂರು: ಕೊಲ್ಲಿ ರಾಷ್ಟ್ರಗಳ ಯುದ್ಧದ ಬಿಸಿ ನಡುವೆಯೂ ಬಂಗಾರ ಪ್ರಿಯರಿಗೆ ಗುಡ್‌ನ್ಯೂಸ್‌ ಸಿಕ್ಕಿದೆ. ಸತತ ಏರುಗತಿಯಲ್ಲಿ ಸಾಗುತ್ತಿದ್ದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ