Breaking News

ಮಾಲ್ಡಿವ್ಸ್ ಪ್ರವಾಸಕ್ಕೆ ತೆರಳಿದ್ದು ಎಂಜಾಯ್ ಮಾಡುತ್ತಿದ್ದಾರೆ. ನಟಿ ಪ್ರಣೀತಾ

Spread the love

ಬೆಂಗಳೂರು: ನಟಿ ಪ್ರಣೀತಾ ಸುಭಾಷ್ ಸಖತ್ ಬ್ಯುಸಿಯಾಗಿದ್ದು, ಬಹುಭಾಷಾ ನಟಿಯಾಗಿ ಬೆಳೆದಿದ್ದಾರೆ. ಸ್ಯಾಂಡಲ್‍ವುಡ್‍ನಿಂದ ಹಿಂದಿ, ತೆಲುಗು, ತಮಿಳು ಸಿನಿಮಾಗಳಲ್ಲಿ ಸಹ ಮಿಂಚುತ್ತಿದ್ದಾರೆ. ಹಲವು ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದರೂ ಬಿಡುವು ಮಾಡಿಕೊಂಡು ಮಾಲ್ಡಿವ್ಸ್ ಪ್ರವಾಸಕ್ಕೆ ತೆರಳಿದ್ದು ಎಂಜಾಯ್ ಮಾಡುತ್ತಿದ್ದಾರೆ.ಲಾಕ್‍ಡೌನ್ ಬಳಿಕ ಪ್ರಣಿತಾ ಶೂಟಿಂಗ್‍ನಲ್ಲಿ ಭಾಗವಹಿಸಿದ್ದರು. ಬಾಲಿವುಡ್ ಸಿನಿಮಾ ಹಂಗಾಮಾ-2 ಚಿತ್ರೀಕರಣದ ಬಳಿ ಬ್ರೇಕ್ ಪಡೆದಿರುವ ಅವರು ಮಾಲ್ಡಿವ್ಸ್ ಪ್ರವಾಸ ಕೈಗೊಂಡಿದ್ದಾರೆ. ಕಳೆದ ಕೆಲ ದಿನಗಳಿಂದ ತಮ್ಮ ಮಾಲ್ಡಿವ್ಸ್ ಡೇಸ್ ಚಿತ್ರಗಳನ್ನು ಹಂಚಿಕೊಳ್ಳುತ್ತಿದ್ದು, ಡೈವಿಂಗ್ ವಿಡಿಯೋಗಳನ್ನು ಸಹ ಶೇರ್ ಮಾಡುತ್ತಿದ್ದಾರೆ. ಅವರ ಅಭಿಮಾನಿಗಳು ಸಹ ಕಮೆಂಟ್ ಮಾಡಿ ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ.

ಲಾಕ್‍ಡೌನ್ ದಿನಗಳಲ್ಲಿ ಬಡವರಿಗೆ ಸಹಾಯ ಮಾಡುವುದರಲ್ಲೇ ಕಾಲ ಕಳೆದಿದ್ದ ಪ್ರಣಿತಾ, ಮನೆಯಲ್ಲಿ ಸಖತ್ ಬೋರ್ ಎನ್ನುತ್ತಿದ್ದರು. ಇದೀಗ ವಿದೇಶ ಪ್ರವಾಸ ಕೈಗೊಂಡು ಎಂಜಾಯ್ ಮಾಡುತ್ತಿದ್ದಾರೆ. ರೆಸ್ಟೋರೆಂಟ್ ಬಳಿ ಸೈಕ್ಲಿಂಗ್ ಮಾಡಿರುವುದು, ಡೈವಿಂಗ್ ಮಾಡುತ್ತಿರುವುದು ಸೇರಿದಂತೆ ವಿವಿಧ ಬಗೆ ವಿಡಿಯೋ ಹಾಗೂ ಚಿತ್ರಗಳನ್ನು ಹಂಚಿಕೊಳ್ಳುತ್ತಿದ್ದಾರೆ. ಫೇಸ್ಬುಕ್‍ನಲ್ಲಿ ಸ್ಕೂಬಾ ಸ್ಕೂಟರ್ ಡೈವಿಂಗ್ ವಿಡಿಯೋ ಪೋಸ್ಟ್ ಮಾಡಿದ್ದು, ಮೊದಲ ಬಾರಿ ಸೀ ಬಿಓಬಿ ಮಾಡಿದ್ದೇನೆ, ನಿಮಗೆ ಏನನ್ನಿಸಿತು? ಸಮುದ್ರದಲ್ಲಿ ನಿಂತ ವಿಮಾನ ಹಾಗೂ ಮೇಲೆ ತೇಲುವ ಕಪ್ಪು ಮೋಡಗಳು ಭಾವನೆಯನ್ನು ಹೆಚ್ಚಿಸುತ್ತವೆ ಎಂದು ಬರೆದಿದ್ದಾರೆ.

ಇದಕ್ಕೂ ಮುನ್ನ ರೆಸಾರ್ಟ್‍ವೊಂದರ ಬಳಿ ಸೈಕಲ್ ಓಡಿಸುತ್ತಿರುವ ಫೋಟೋ ಹಂಚಿಕೊಂಡಿದ್ದ ಪ್ರಣಿತಾ ದಿ ರೆಸಾರ್ಟ್ ಲೈಫ್ ಎಂದು ಬರೆದಿದ್ದರು. ಅಲ್ಲದೆ ಸ್ವಿಮ್ಮಿಂಗ್ ಮಾಡುವ ವಿಡಿಯೋ ಸಹ ಪೋಸ್ಟ್ ಮಾಡಿದ್ದರು. ಹೀಗೆ ಮಾಲ್ಡಿವ್ಸ್‍ನಲ್ಲಿ ಎಂಜಾಯ್ ಮಾಡುತ್ತಿರುವ ಕುರಿತು ಪ್ರಣಿತಾ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳುತ್ತಿದ್ದು, ಅವರ ಅಭಿಮಾನಿಗಳು ಸಹ ಮೆಚ್ಚುಗೆ ವ್ಯಕ್ತಪಡಿಸಿ ಕಮೆಂಟ್ ಮಾಡುತ್ತಿದ್ದಾರೆ.

ಲಾಕ್‍ಡೌನ್ ಸಡಿಲಗೊಳಿಸಿದ ಬಳಿಕ ಹೇರ್ ಕಟಿಂಗ್ ಮಾಡಿಸಿ ಶೂಟಿಂಗ್‍ಗೆ ತಯಾರಾಗುತ್ತಿರುವ ಕುರಿತು ತಿಳಿಸಿದ್ದರು. ಹೇರ್ ಕಟಿಂಗ್ ಬಳಿಕ ಸ್ಟೈಲಿಶ್ ಆಗಿ ಕಾಣಿಸಿಕೊಂಡಿದ್ದ ಫೋಟೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದರು. ಇದೀಗ ಚಿತ್ರೀಕರಣವನ್ನೂ ಮುಗಿಸಿ ಕೆಲ ದಿನಗಳ ಬಿಡುವು ಮಾಡಿಕೊಂಡು ಪ್ರವಾಸ ಹೋಗಿದ್ದಾರೆ.


Spread the love

About Laxminews 24x7

Check Also

ತರುಣ್ ಸುಧೀರ್ ನಿರ್ಮಾಣದ ‘ಏಳುಮಲೆ’ ಸಿನಿಮಾದ ಮೆಲೋಡಿ ಹಾಡು ರಿಲೀಸ್..

Spread the love ತರುಣ್ ಸುಧೀರ್ ನಿರ್ಮಾಣದ ‘ಏಳುಮಲೆ’ ಸಿನಿಮಾದ ಮೆಲೋಡಿ ಹಾಡು ರಿಲೀಸ್.. ರಾಣಾ-ಪ್ರಿಯಾಂಕಾ ಜೋಡಿಯ ಏಳುಮಲೆ ಸಿನಿಮಾದ‌ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ