Breaking News

ಏ. 18 ರಂದು ಸರಳ ರೀತಿಯಲ್ಲಿ ಪ್ರಿಯಾಂಕಾ ಜಾರಕಿಹೊಳಿ ನಾಮಪತ್ರ ಸಲ್ಲಿಕೆ

Spread the love

ಚಿಕ್ಕೋಡಿ: ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪ್ರಿಯಾಂಕಾ ಜಾರಕಿಹೊಳಿ ಏಪ್ರಿಲ್ 18ರಂದು ನಾಮಪತ್ರ ಸಲ್ಲಿಸಲಿದ್ದಾರೆ.

ಸರಳ ರೀತಿಯಲ್ಲಿ ನಾಮಪತ್ರ ಸಲ್ಲಿಸುತ್ತೇನೆ. ತಾವೆಲ್ಲರೂ ಸಹಕರಿಸಬೇಕು ಎಂದು ಕ್ಷೇತ್ರದ ಜನರಿಗೆ ಮನವಿ ಮಾಡಿದ್ದಾರೆ. ಏಪ್ರಿಲ್ 18ರಂದು ನಾಮಪತ್ರವನ್ನು ಸರಳ ರೀತಿಯಲ್ಲಿ ಸಲ್ಲಿಸುತ್ತೇನೆ.

ಅಂದು ಕೆಲವೇ ಕೆಲವು ಜನಪ್ರತಿನಿಧಿಗಳು ನನಗೆ ಸಾಥ್ ನೀಡಲಿದ್ದಾರೆ.

ಸುಡು ಬಿಸಿಲಿನಲ್ಲಿ ಕಾರ್ಯಕರ್ತರು ಹಾಗೂ ಬೃಹತ್ ರ್ಯಾಲಿಯಿಂದ ಸಾಮಾನ್ಯ ಜನರಿಗೆ ತೊಂದರೆಯಾಗದಂತೆ ನೋಡಿಕೊಳ್ಳಲು ತಂದೆ ಸತೀಶ್ ಜಾರಕಿಹೊಳಿ ಅವರು ತಿಳಿಸಿದ್ದಾರೆ. ಹಾಗಾಗಿ ತಂದೆಯವರ ಮಾರ್ಗದರ್ಶನದಂತೆ ಸರಳವಾಗಿ ತೆರಳಿ ನಾಮಪತ್ರ ಸಲ್ಲಿಸುವುದಾಗಿ ಅವರು ಮಾಹಿತಿ ನೀಡಿದ್ದಾರೆ.


Spread the love

About Laxminews 24x7

Check Also

ಏಪ್ರಿಲ್‌ಗೆ ಜಿಬಿಎ, ಸ್ಥಳೀಯ ಸಂಸ್ಥೆ ಚುನಾವಣೆ ಸಿದ್ಧತೆಗೆ ಜಿಲ್ಲಾಧಿಕಾರಿಗಳಿಗೆ ಆಯೋಗ ಸೂಚನೆ

Spread the loveಬೆಂಗಳೂರು:ಕಳೆದ ನಾಲ್ಕೈದು ವರ್ಷಗಳಿಂದ ಒಂದಿಲ್ಲೊಂದು ಕಾರಣಗಳಿಂದ ಪದೇ ಪದೇ ಮುಂದೂಡಲಾಗಿದ್ದ ಕರ್ನಾಟಕ ಸ್ಥಳೀಯ ಸಂಸ್ಥೆಗಳ ಚುನಾವಣೆಯು ಮುಂಬರುವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ