ಚನ್ನಮ್ಮನ ಕಿತ್ತೂರು: ‘ರೈತ ವಿರೋಧಿ ಧೋರಣೆ ತಳೆದಿರುವ ರಾಜ್ಯ ಮತ್ತು ಕೇಂದ್ರ ಸರ್ಕಾರಗಳಿಗೆ ಹಿಡಿದಿರುವ ಚಳಿಯನ್ನು ಬಿಡಿಸಲಾಗುವುದು. ವಿಧಾನಸಭೆಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಲಾಗುವುದು’ ಎಂದು ರೈತ ಮುಖಂಡ ಇಂಗಳಗುಪ್ಪೆ ಕೃಷ್ಣೇಗೌಡ ಘೋಷಿಸಿದರು.
ಇಲ್ಲಿಯ ಗುರುವಾರ ಪೇಟೆಯಲ್ಲಿ ಸೋಮವಾರ ರೈತಸಂಘಗಳ ಒಕ್ಕೂಟದ ಕೇಂದ್ರ ಕಚೇರಿಗೆ ಚಾಲನೆ ನೀಡಿ ಮಾತನಾಡಿದ ಅವರು ‘ನೆಲ, ಜಲ, ಭಾಷೆ ವಿಷಯದಲ್ಲಿ ರಾಜಕಾರಣ ಮಾಡುತ್ತಿರುವ ನಾಯಕರಿಗೂ ಪಾಠ ಕಲಿಸಲಾಗುವುದು’ ಎಂದು ಹೇಳಿದರು.

’18 ರೈತಸಂಘಟನೆಗಳ ಸದಸ್ಯರು ಈ ಒಕ್ಕೂಟದಲ್ಲಿ ಸೇರಿಕೊಂಡಿದ್ದಾರೆ. ಚುನಾವಣೆ ಮುಗಿದ ನಂತರ ಇನ್ನೂ 18 ಸಂಘಟನೆಗಳು ಇದರಡಿ ಬರುತ್ತವೆ. ಎಲ್ಲರೂ ಒಂದು ಬಲಿಷ್ಠ ಶಕ್ತಿಯಾಗಿ ಹೋರಾಟ ಮಾಡಲಾಗುವುದು’ ಎಂದರು.
Laxmi News 24×7