Breaking News

HDK ವಿರುದ್ಧ ರಾಜ್ಯಾದ್ಯಂತ ಮಹಿಳೆಯರಿಂದ ಪ್ರತಿಭಟನೆ: ಡಿಕೆಶಿ

Spread the love

ಬೆಳಗಾವಿ: ಹೆಣ್ಣು ಮಕ್ಕಳು ದಾರಿ ತಪ್ಪಿದ್ದಾರೆ ಎನ್ನುತ್ತಿರುವ ಕುಮಾರಸ್ವಾಮಿ ವಿರುದ್ಧ ರಾಜ್ಯಾದ್ಯಂತ ಮಹಿಳೆಯರಿಂದ ಪ್ರತಿಭಟನೆಗೆ ಕರೆ ನೀಡಲಾಗುವುದು ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಮ್ಮ ಹೆಣ್ಣು ಮಕ್ಕಳು ದಡ್ಡರಾ?

HDK ವಿರುದ್ಧ ರಾಜ್ಯಾದ್ಯಂತ ಮಹಿಳೆಯರಿಂದ ಪ್ರತಿಭಟನೆ: ಡಿಕೆಶಿ

ಎಲ್ಲ ಮಹಿಳೆಯರ ಸ್ವಾಭಿಮಾನದ ಪ್ರಶ್ನೆ ಇದು. ನಿಮ್ಮ ಬದುಕಿನಲ್ಲಿ ನಿಮ್ಮ ಬದಲಾವಣೆಗೆ ಶಕ್ತಿ ಕೊಡಲು ಪಂಚ ಗ್ಯಾರಂಟಿ ನೀಡಿದ್ದೇವೆ. ಮಹಿಳೆಯರು ದಾರಿ ತಪ್ಪಿದ್ದಾರೆ ಎಂಬ ಕುಮಾರಸ್ವಾಮಿ ಹೇಳಿಕೆಯನ್ನು ಖಂಡಿಸಿ ಎಲ್ಲ ಮಹಿಳೆ ಯರು ಪಕ್ಷಭೇದ ಮರೆತು ಪ್ರತಿಭಟನೆ ನಡೆಸಲು ಕರೆ ನೀಡುತ್ತೇನೆ. ಎಲ್ಲ ಮಹಿಳಾ ಸಂಘಟನೆಗಳು ಪ್ರತಿ ತಾಲೂಕಿನಲ್ಲಿ ಹೋರಾಟ ಮಾಡಬೇಕು ಎಂದರು.

ಸಮಾನತೆ ಇದ್ದವರ ಬಗ್ಗೆ ಮಾತ್ರ ಮಾತನಾಡುವೆ: ಜಾರಕಿಹೊಳಿಗೆ ಟಾಂಗ್‌
ಚುನಾವಣೆ ಬಳಿಕ ಡಬಲ್‌ ಎಂಜಿನ್‌ ಸರಕಾರ ರಚನೆ ಮಾಡುತ್ತೇವೆ ಎಂದ ರಮೇಶ ಜಾರಕಿಹೊಳಿ ಹೇಳಿಕೆಗೆ ಪ್ರತಿಕ್ರಿಯಿಸಿದ ಡಿಕೆಶಿ, ನನ್ನ ಲೆವೆಲ್‌ಗೆ ಯಾರಾದರೂ ಮಾತನಾಡಿದರೆ ಮಾತನಾಡುತ್ತೇನೆ. ನಮಗೆ ಹೊಂದಾಣಿಕೆ ಆಗದವರ ಬಗ್ಗೆ ಮಾತನಾಡುವುದಿಲ್ಲ ಎಂದು ಹೇಳಿದರು.


Spread the love

About Laxminews 24x7

Check Also

ಬಜೆಟ್‌ ಪೂರ್ವಭಾವಿ ಸಭೆ ಆರಂಭಿಸಿದ ಸಿಎಂ ಸಿದ್ದರಾಮಯ್ಯ

Spread the loveಬೆಂಗಳೂರು, ಫೆ.5- ಮುಖ್ಯ ಮಂತ್ರಿ ಸಿದ್ದರಾಮಯ್ಯ ಅಧಿಕೃತವಾಗಿ ಇಂದಿನಿಂದ ಬಜೆಟ್‌ ತಯಾರಿಕೆಯ ಪೂರ್ವಭಾವಿ ಸಭೆಗಳನ್ನು ಆರಂಭಿಸಿದ್ದಾರೆ.ಮಾರ್ಚ್‌ 6ರಂದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ