Breaking News

ಈಶ್ವರಪ್ಪ ಬಂಡಾಯವನ್ನು ರಾಜಾಹುಲಿ ಶಮನ ಮಾಡಲಿ: ಯತ್ನಾಳ್

Spread the love

ವಿಜಯಪುರ: ಯಾವುದೇ ಕಾರಣಕ್ಕೂ ಡಾ.ಬಿ.ಆರ್.ಅಂಬೇಡ್ಕರ್ ಅವರ ಸಂವಿಧಾನ ಬದಲಾವಣೆ ಮಾಡುವ ಪ್ರಶ್ನೆ ಇಲ್ಲ ಎಂದು ಸಾರಿದ ಬಿಜೆಪಿ ಹಿರಿಯ ಶಾಸಕ ಬಸನಗೌಡ ಪಾಟೀಲ ಯತ್ನಾಳ್, ಬಿ.ಆರ್.ಅಂಬೇಡ್ಕರ್ ಅವರಿಗೆ ಭಾರತರತ್ನ ಕೊಟ್ಟದ್ದು ಬಿಜೆಪಿ ಸರ್ಕಾರದ ಅವಧಿಯಲ್ಲಿ ಎಂದು ಹೇಳಿದರು.

 

ನಗರದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಯಾರು ಏನೇ ಮಾತನಾಡಿದರೂ ಭಾರತದ ಸಂವಿಧಾನ ಬದಲಾವಣೆ ಮಾಡಲು ಸಾಧ್ಯವಿಲ್ಲ, ಈ ವಿಷಯದನ್ನು ನಾನಲ್ಲ ಸ್ವಯಂ ಪ್ರಧಾನಿ ನರೇಂದ್ರ ಮೋದಿ ಅವರೇ ಸ್ಪಷ್ಟಪಡಿಸಿದ್ದಾರೆ ಎಂದರು.

Loksabha Election; ಈಶ್ವರಪ್ಪ ಬಂಡಾಯವನ್ನು ರಾಜಾಹುಲಿ ಶಮನ ಮಾಡಲಿ: ಯತ್ನಾಳ್

ಶಿವಮೊಗ್ಗದಲ್ಲಿ ಕೆ.ಎಸ್.ಈಶ್ವರಪ್ಪ ಅವರ ಬಂಡಾಯವನ್ನು ರಾಜಾಹುಲಿ, ರಾಜ್ಯಾಧ್ಯಕ್ಷ ಸೇರಿ ಶಮನ ಮಾಡಬೇಕು. ತಮಗೆ ಬೇಕಾದವರನ್ನು ಪಕ್ಷದ ಉಪಾಧ್ಯಕ್ಷ, ಪದಾಧಿಕಾರಿ ಮಾಡಿಕೊಂಡಿದ್ದು, ಅವರೇ ಪಕ್ಷದ ವಿರುದ್ಧ ಕೆಲಸ ಮಾಡುತ್ತಿದ್ದಾರೆ. ತಕ್ಷಣ ಅಂಥವರ ವಿರುದ್ಧ ಕ್ರಮ ಕೈಗೊಳ್ಳಬೇಕು, ಕೈಗೊಳ್ಳದಿದ್ದರೆ ವಿಜಯೇಂದ್ರ ತಲೆದಂಡ ಆಗಲಿದ್ದಾರೆ ಎಂದರು.

ವಿಜಯಪುರ ಜಿಲ್ಲೆಯ ಸಿಂದಗಿ, ಆಲಮೇಲ, ಕಲಕೇರಿ ಭಾಗದಲ್ಲಿ ರಜಾಕರ ಹಾವಳಿ ಇತ್ತು, ಹೀಗಾಗಿ ವಿಜಯಪುರ ಜಿಲ್ಲೆಗೆ ಸಂವಿಧಾನದ 371 ನೇ ಕಲಂ ಅನ್ವಯ ವಿಶೇಷ ಸ್ಥಾನಮಾನ ಜಾರಿ ಮಾಡಬೇಕು ಎಂಬುದು ಒತ್ತಾಯ ಕೇಳಿ ಬರುತ್ತಿದೆ ಎಂದರು.


Spread the love

About Laxminews 24x7

Check Also

ಹಾರೂಗೇರಿ : ಕಬ್ಬು ತುಂಬಿದ ಟ್ರ್ಯಾಕ್ಟ‌ರ್ ಪಲ್ಟಿ ; ಭಯಾನಕ ದೃಶ್ಯ ಸಿಸಿ ಟಿವಿಯಲ್ಲಿ ಸೆರೆ

Spread the loveರಾಯಬಾಗ : ಕಬ್ಬು ತುಂಬಿದ್ದ ಟ್ರ್ಯಾಕ್ಟರ್‌ ಗೂಡಂಗಡಿಗಳ ಮೇಲೆ ಪಲ್ಟಿ ಆಗಿರುವ ಘಟನೆ ರಾಯಬಾಗ ತಾಲೂಕಿನ ಹಾರೂಗೇರಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ