Breaking News
Home / Uncategorized / ವಿಜಯನಗರ ಪ್ರತ್ಯೇಕ ಜಿಲ್ಲೆ ಮಾಡಲು ನಿರ್ಧರಿಸಿರುವುದು ಸ್ವಾಗತಾರ್ಹ:ಆನಂದ್ ಸಿಂಗ್

ವಿಜಯನಗರ ಪ್ರತ್ಯೇಕ ಜಿಲ್ಲೆ ಮಾಡಲು ನಿರ್ಧರಿಸಿರುವುದು ಸ್ವಾಗತಾರ್ಹ:ಆನಂದ್ ಸಿಂಗ್

Spread the love

ಬೆಂಗಳೂರು: ವಿಜಯನಗರ ಪ್ರತ್ಯೇಕ ಜಿಲ್ಲೆ ಮಾಡಲು ನಿರ್ಧರಿಸಿರುವುದು ಸ್ವಾಗತಾರ್ಹ ಎಂದು ಅರಣ್ಯ ಸಚಿವ ಆನಂದ್ ಸಿಂಗ್ ತಿಳಿಸಿದ್ದಾರೆ.

ಸಚಿವ ಸಂಪುಟ ಸಭೆಯ ಬಳಿಕ ಮಾತನಾಡಿದ ಅವರು, ಬಹುದಿನದ ಬೇಡಿಕೆ ಈಡೇರಿದೆ. ಹಿಂದೂ ಸಾಮ್ರಾಜ್ಯವಾಗಿದ್ದ ವಿಜಯನಗರ ಕ್ಷೇತ್ರವನ್ನು ಮಾದರಿ ಜಿಲ್ಲೆಯಾಗಿ ಮಾಡಬೇಕೆಂಬ ಐತಿಹಾಸಿಕ ತೀರ್ಮಾನ ಮಾಡಿದಂತಾಗಿದೆ. ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡಿದ್ದೇವೆ. ಬಳ್ಳಾರಿ ಪಶ್ಚಿಮ ಭಾಗದ ತಾಲೂಕುಗಳ ಬೇಡಿಕೆ ಈಡೇರಿದೆ ಎಂದು ಹೇಳಿದರು.ಈ ಬೇಡಿಕೆ ನನ್ನ ಒಬ್ಬನದ್ದಲ್ಲ. ಬೇಡಿಕೆ ಇಟ್ಟವರ ಧ್ವನಿಯಾಗಿ ಇಂದು ನಾನು ಸರ್ಕಾರದ ಮುಂದೆ ಮನವಿ ಮಾಡಿಕೊಂಡಿದ್ದೇನೆ. ಇಂದು ಆ ಮನವಿಯನ್ನು ಸ್ವೀಕಾರ ಮಾಡಿಕೊಂಡು ಮುಖ್ಯಮಂತ್ರಿಗಳು ಮತ್ತು ಸಚಿವ ಸಂಪುಟದ ಎಲ್ಲಾ ಸಚಿವರು ವಿಜಯನಗರ ಜಿಲ್ಲೆ ಆಗಲೇಬೇಕು ಎಂಬ ಒಂದೇ ತೀರ್ಮಾನಕ್ಕೆ ಬದ್ಧರಾಗಿ ಅನುಮೋದನೆ ತೆಗೆದುಕೊಂಡಿದ್ದಾರೆ. ತಾಂತ್ರಿಕವಾಗಿ ಯಾವ ರೀತಿ ಹಾಗೂ ಯಾವ ಯಾವ ತಾಲೂಕುಗಳನ್ನು ಸೇರಿಸಬೇಕು ಎಂಬುದನ್ನು ಮುಂದಿನ ದಿನಗಳಲ್ಲಿ ಘೋಷಣೆ ಮಾಡುತ್ತಾರೆ. ಪ್ರತಿಯೊಂದು ಒಳ್ಳೆಯ ಕೆಲಸಗಳಾಗಬೇಕಾದಾಗ ಒತ್ತಾಯಗಳು ಇರುತ್ತವೆ. ಆಗ ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಸರಿಪಡಿಸಲಾಗುತ್ತದೆ ಎಂದರು.


Spread the love

About Laxminews 24x7

Check Also

ಬೆಳಗಾವಿ ಲೋಕಸಭೆ: 4,524 ಮತಗಟ್ಟೆ, 24 ಸಾವಿರ ಸಿಬ್ಬಂದಿ ಸನ್ನದ್ಧ

Spread the loveಬೆಳಗಾವಿ: ‘ಜಿಲ್ಲೆಯಲ್ಲಿ ಮೇ 7ರಂದು ನಡೆಯಲಿರುವ ಲೋಕಸಭೆ ಚುನಾವಣೆ ಮತದಾನ ಪ್ರಕ್ರಿಯೆಯನ್ನು ಮುಕ್ತ ಮತ್ತು ನ್ಯಾಯಸಮ್ಮತವಾಗಿ ನಡೆಸಲು ಜಿಲ್ಲಾಡಳಿತದಿಂದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ