ವಿಜಯಪುರ: ಕುಡಿಯುವ ನೀರಿಗೆ ಆಗ್ರಹಿಸಿ ವಿಜಯಪುರ ಜಿಲ್ಲೆ ದೇವರಹಿಪ್ಪರಗಿ ತಾಲೂಕಿನ ಬಿ ಬಿ ಇಂಗಳಗಿ ಗ್ರಾಮಸ್ಥರು ದೇವರ ಹಿಪ್ಪರಗಿ ತಾಲೂಕ ತಹಸೀಲ್ದಾರ್ ಕಚೇರಿ ಎದುರಿಗೆ ಪ್ರತಿಭಟನೆ ನಡೆಸಿದರು.

ಕಚೇರಿ ಮುಂದೆ ಬಿಂದಿಗೆ ಇಟ್ಟುಕೊಂಡು ಪ್ರತಿಭಟನೆ ನಡೆಸಿದ್ದು, ಗ್ರಾಮಕ್ಕೆ ಕುಡಿಯುವ ನೀರು ಟ್ಯಾಂಕರ್ ಮುಕಾಂತರ ವ್ಯವಸ್ಥೆ ಮಾಡುವಂತೆ ಪಟ್ಟು ಹಿಡಿದು ಸಮರ್ಪಕವಾಗಿ ನೀರು ಪೂರೈಸಲು ಆಗ್ರಹಿಸಿದ್ದಾರೆ.
Laxmi News 24×7