Breaking News

ಕಚ್ಚಿದ ಹಾವನ್ನು ಕೊಂದು ಆಸ್ಪತ್ರೆಗೆ ತೆಗೆದುಕೊಂಡು ಬಂದ ಮಹಿಳೆ; ಬೆಚ್ಚಿಬಿದ್ದ ವೈದ್ಯರು

Spread the love

ತೆಲಂಗಾಣ: ಕಚ್ಚಿದ ಹಾವನ್ನು ಹೊಡೆದು ಕೊಂದು ಮಹಿಳೆ ತನ್ನ ಜೆತೆಗೆ ಆಸ್ಪತ್ರೆಗೆ ತೆಗೆದುಕೊಂಡು ಬಂದಿದ್ದಾಳೆ. ಈ ಘಟನೆ ತೆಲಂಗಾಣದ ಮುಳುಗು ಜಿಲ್ಲೆಯಲ್ಲಿ ನಡೆದಿದೆ.

ನಡೆದಿದ್ದೇನು?: ಮುಳುಗು ಜಿಲ್ಲೆಯ ವೆಂಕಟಾಪುರಂ ಮಂಡಲದ ಮುಕುನೂರುಪಾಲೆಂ ಗ್ರಾಮದ ಶಾಂತಾ ಕೂಲಿ ಕೆಲಸಕ್ಕೆ ಹೋಗಿದ್ದರುಎಂದಿನಂತೆ ಕೂಲಿ ಕೆಲಸಕ್ಕೆ ಹೋಗಿದ್ದರು. ಈ ವೇಳೆ ಮಹಿಳೆಗೆ ಹಾವು ಕಚ್ಚಿದೆ. ಕೂಡಲೇ ಎಚ್ಚೆತ್ತ ಮಹಿಳೆ ತನ್ನ ಸಹ ಕಾರ್ಮಿಕರೊಂದಿಗೆ ಸೇರಿ ಹಾವನ್ನು ಹೊಡೆದು ಸಾಯಿಸಿದ್ದಾರೆ. ವೆಂಕಟಾಪುರ ಸರ್ಕಾರಿ ಆಸ್ಪತ್ರೆಗೆ ಚಿಕಿತ್ಸೆಗೆಂದು ತೆರಳಿದ್ದಾರೆ.

ಆಸ್ಪತ್ರೆಗೆ ಹೋದರೆ ಯಾವ ಹಾವು ಕಚ್ಚಿದೆ ಎಂದು ವೈದ್ಯರು ಕೇಳಿದರೆ ಏನು ಮಾಡಲಿ ಎಂದು ತಿಳಿಯದೇ ಮಹಿಳೆ ಕೊಂದ ಹಾವನ್ನು ಡಬ್ಬಿಯೊಂದರಲ್ಲಿ ಹಾಕಿಕೊಂಡು ಆಸ್ಪತ್ರೆಗೆ ಹೋಗಿದ್ದಾಳೆ.ತಬ್ಬಿಬ್ಬಾದ ವೈದ್ಯಕೀಯ ಸಿಬ್ಬಂದಿ ಮಹಿಳೆಯ ಕೈಯಲ್ಲಿ ಸತ್ತ ಹಾವನ್ನು ಕಂಡು ಬೆಚ್ಚಿಬಿದ್ದಿದ್ದಾರೆ.ಮಹಿಳೆ ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.


Spread the love

About Laxminews 24x7

Check Also

ಬಿಗ್‌ ಡೀಲ್‌ ಸಕ್ಸಸ್‌ – ಭಾರತದ ಮೇಲಿನ 25% ಹೆಚ್ಚುವರಿ ಸುಂಕ ಕಡಿತ ಆದೇಶಕ್ಕೆ ಟ್ರಂಪ್‌ ಸಹಿ

Spread the loveವಾಷಿಂಗ್ಟನ್‌: ಭಾರತ ಮತ್ತು ಅಮೆರಿಕ ನಡುವಿನ ವ್ಯಾಪಾರ ಒಪ್ಪಂದ ಕೊನೆಗೂ ಸಕ್ಸಸ್‌ ಕಂಡಿದೆ. ರಷ್ಯಾ ತೈಲ ಖರೀದಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ