Breaking News

ಗ್ಯಾರಂಟಿ ಯೋಜನೆಗಳ ಟೀಕೆಗೆ ತಾಯಂದಿರೇ ಉತ್ತರ ನೀಡುತ್ತಾರೆ: ಡಿಕೆ ಶಿ

Spread the love

ಬೆಂಗಳೂರು: ನಿರೀಕ್ಷೆಯಂತೆ ಬಿಜೆಪಿ ಮಾಜಿ ಸಂಸದ ಕರಡಿ ಸಂಗಣ್ಣ ಸೇರಿದಂತೆ ನಿವೃತ್ತ ಐಎಎಸ್ ಅಧಿಕಾರಿ ಎ.ಎಸ್. ಪುಟ್ಟಸ್ವಾಮಿ, ದಾಸರಹಳ್ಳಿ ಕೃಷ್ಣಮೂರ್ತಿ ‘ಕೈ’ ಸೇರಿದರು.

ಕೆಪಿಸಿಸಿ ಕಚೇರಿಯಲ್ಲಿ ಬುಧವಾರ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.

ಶಿವಕುಮಾರ್ ಸಮ್ಮುಖದಲ್ಲಿ ಕಾಂಗ್ರೆಸ್ ಸೇರುವ ಮೂಲಕ ಮೈತ್ರಿಕೂಟಕ್ಕೆ ಮತ್ತೊಂದು ಆಘಾತ ನೀಡಿದರು.

ಈ ವೇಳೆ ಮಾತನಾಡಿದ ಕರಡಿ ಸಂಗಣ್ಣ, ನಾವೆಲ್ಲರೂ ಈ ಚುನಾವಣೆಯನ್ನು ಸವಾಲಾಗಿ ಸ್ವೀಕರಿಸಿದ್ದು, ಶತಾಯಗತಾಯ ಕೊಪ್ಪಳದಲ್ಲಿ ಕಾಂಗ್ರೆಸ್ ಅಭ್ಯರ್ಥಿ ರಾಘವೇಂದ್ರ ಹಿಟ್ನಾಳ್ ಅವರನ್ನು ಗೆಲ್ಲಿಸುತ್ತೇವೆ. ವ್ಯಕ್ತಿಗತ ಅಧಿಕಾರಕ್ಕಾಗಿ ನಾನು ಕಾಂಗ್ರೆಸ್ ಗೆ ಬಂದಿಲ್ಲ, ಜಿಲ್ಲೆಯ ಅಭಿವೃದ್ಧಿ ದೃಷ್ಟಿಯಿಂದ ಬಂದಿದ್ದೇನೆ ಎಂದರು.

ಡಿ.ಕೆ. ಶಿವಕುಮಾರ್ ಮಾತನಾಡಿ, ಗ್ಯಾರಂಟಿ ಮುಂದುವರಿಯುವುದಿಲ್ಲ ಅಂತಾರೆ. ಆದರೆ, ಯಾವುದೇ ಕಾರಣಕ್ಕೂ ಗ್ಯಾರಂಟಿಗಳನ್ನು ಟಚ್ ಮಾಡಲು ಬಿಡುವುದಿಲ್ಲ. ಇವುಗಳ ಟೀಕೆಗಳಿಗೆ ತಾಯಂದಿರೇ ಉತ್ತರ ನಿಡುತ್ತಾರೆ ಎಂದು ಗುಡುಗಿದರು.


Spread the love

About Laxminews 24x7

Check Also

ಹುಲಿ ಸಾವಿನಲ್ಲಿ ಅಧಿಕಾರಿಗಳ ನಿರ್ಲಕ್ಷ್ಯವಿದ್ದಲ್ಲಿ ಶಿಸ್ತುಕ್ರಮ :ಈಶ್ವರ ಖಂಡ್ರೆ

Spread the loveಚಾಮರಾಜನಗರ: ಹೂಗ್ಯಂ ವಲಯದಲ್ಲಿ 5 ಹುಲಿಗಳ ಅಸಹಜ ಸಾವು ಪ್ರಕರಣದಲ್ಲಿ ಯಾವುದೇ ಅಧಿಕಾರಿಯ ನಿರ್ಲಕ್ಷ್ಯ ಕಂಡುಬಂದಲ್ಲಿ, ಶಿಸ್ತುಕ್ರಮ ಜರುಗಿಸಲಾಗುವುದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ