Breaking News

ನೀರಿಲ್ಲದಿದ್ದರೇನು..? ಬಿಯರ್ ಇದೆಯಲ್ಲ.. : ಬೆಂಗಳೂರಲ್ಲಿ ಬಿಯರ್‌ಗೆ ಫುಲ್ ಡಿಮ್ಯಾಂಡ್!

Spread the love

ಬೆಂಗಳೂರು : ರಾಜ್ಯದಲ್ಲಿ ಬಿಸಿಲಿನ ತಾಪಮಾನ ದಿನದಿಂದ ಹೆಚ್ಚಾಗುತ್ತಿದ್ದು, ಬಿಯರ್‌ಗೂ ಬೇಡಿಕೆ ಹೆಚ್ಚಾಗಿದೆ. ಮದ್ಯಪ್ರಿಯರು ಹಾಟ್​ ಡ್ರಿಂಕ್ಸ್​ ಗುಡ್‌ಬೈ ಹೇಳಿ ಕೋಲ್ಡ್​ ಬಿಯರ್​ ಸೇವನೆಗೆ ಮುಂದಾಗಿದ್ದಾರೆ.

ರಾಜ್ಯದಲ್ಲಿ ಕಳೆದ 15 ದಿನಗಳಲ್ಲಿ ಬರೋಬ್ಬರಿ 23.5 ಲಕ್ಷ ಕಾರ್ಟನ್‌ ಬಾಕ್ಸ್ ಬಿಯರ್ ಮಾರಾಟವಾಗಿದೆ.ಕಳೆದ ವರ್ಷಕ್ಕಿಂತ ಈ ವರ್ಷ ಬಿಯರ್ ಮಾರಾಟದಲ್ಲಿ ಏರಿಕೆಯಾಗಿದ್ದು, ದಾಖಲೆ ಬರೆದಿದೆ. ಈ ವರ್ಷ ಶೇ.61ರಷ್ಟು ಮಾರಾಟ ಹೆಚ್ಚಾಗಿದೆ. ಕಳೆದ ಏಪ್ರಿಲ್‌ನಲ್ಲಿ 38.6 ಲಕ್ಷ ಬಾಕ್ಸ್‌ ಬಿಯರ್‌ ಮಾರಾಟವಾಗಿತ್ತು.

ರಾಜ್ಯದಲ್ಲಿ ಈ ತಿಂಗಳ ಏಪ್ರಿಲ್ 1 ರಿಂದ ಏಪ್ರಿಲ್ 11ರ ವರೆಗೆ (11 ದಿನ) 17.67 ಲಕ್ಷ ಲೀಟರ್ ವಿವಿಧ ಬ್ರ್ಯಾಂಡ್‌ನ ಬಿಯರ್ ಮಾರಾಟವಾಗಿವೆ. ಹಿಂದಿನ ವರ್ಷಗಳಿಗೆ ಹೋಲಿಸಿದರೆ ಈ ವರ್ಷ ಬೇಸಿಗೆಯಲ್ಲಿ ಶೇ.30ರಷ್ಟು ಬಿಯರ್‌ ಮಾರಾಟವಾಗಿದೆ ಎಂದು ಅಬಕಾರಿ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ. ಇನ್ನೂ ಕುತೂಹಲದ ವಿಚಾರ ಅಂದರೆ, ಬಿಸಿಲು ಹೆಚ್ಚಳದಿಂದಾಗಿ ಮದ್ಯಪ್ರಿಯರು ಒಂದು ಬಿಯರ್‌ ಬದಲಿಗೆ ಎರಡು ಬಿಯರ್‌ ಕುಡಿಯುತ್ತಿದ್ದಾರಂತೆ.


Spread the love

About Laxminews 24x7

Check Also

ಜನರ ಆರೋಗ್ಯ ಕಾಪಾಡುವ ಸರಕಾರದ ಸಂಕಲ್ಪಕ್ಕೆ ಕೈಜೋಡಿಸಿ: ಲಕ್ಷ್ಮೀ ಹೆಬ್ಬಾಳಕರ್

Spread the loveಜನರ ಆರೋಗ್ಯ ಕಾಪಾಡುವ ಸರ್ಕಾರದ ಸಂಕಲ್ಪ ಸಾಕಾರಗೊಳ್ಳಬೇಕಾದರೆ ಸಾರ್ವಜನಿಕರು ಹಾಗೂ ಸಂಘ-ಸಂಸ್ಥೆಗಳು ಕೈಜೋಡಿಸುವುದು ಅಗತ್ಯ ಎಂದು ಮಹಿಳಾ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ