Breaking News
Home / ರಾಜಕೀಯ / ಬೆಂಗಳೂರು ಗ್ರಾಮಾಂತರ, ಮಂಡ್ಯದಲ್ಲಿ ವರ್ಷದ ಮೊದಲ ಮಳೆ

ಬೆಂಗಳೂರು ಗ್ರಾಮಾಂತರ, ಮಂಡ್ಯದಲ್ಲಿ ವರ್ಷದ ಮೊದಲ ಮಳೆ

Spread the love

ಗುರುವಾರ ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು, ಮಿಂಚು ಸಹಿತ ವ್ಯಾಪಕ ಮಳೆಯಾಗುತ್ತಿದೆ. ಉತ್ತರ ಮತ್ತು ಮಧ್ಯ ಕರ್ನಾಟಕ ಭಾಗದ ಜಿಲ್ಲೆಗಳಲ್ಲಿ ಆಲಿಕಲ್ಲು ಸಹಿತ ಮಳೆಯಾಗುತ್ತಿದೆ. ಆದರೆ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಇನ್ನೂ ಮಳೆ ದರ್ಶನ ನೀಡಿಲ್ಲ.

Bengaluru Rain: ಬೆಂಗಳೂರು ಗ್ರಾಮಾಂತರ, ಮಂಡ್ಯದಲ್ಲಿ ವರ್ಷದ ಮೊದಲ ಮಳೆ

ಗುರುವಾರ ಬೆಂಗಳೂರು ನಗರ ಮತ್ತು ಗ್ರಾಮಾಂತರ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯಲ್ಲಿ ತಿಳಿಸಿತ್ತು.

ಅದರಂತೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ವರ್ಷದ ಮೊದಲ ಮಳೆ ದಾಖಲಾಗಿದೆ.

ಗುರುವಾರ ಸಂಜೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಆನೇಕಲ್ ಪಟ್ಟಣದಲ್ಲಿ ಸಾಧಾರಣ ಮಳೆಯಾಗಿದೆ. ಪೃಥ್ವಿ ರೆಡ್ಡಿ ಎನ್ನುವವರು ಎಕ್ಸ್ ಖಾತೆಯಲ್ಲಿ ಮಳೆಯ ವಿಡಿಯೋ ಹಂಚಿಕೊಂಡಿದ್ದು, ಈ ವರ್ಷದ ಮೊದಲ ಮಳೆ ಎಂದು ಬರೆದಿದ್ದಾರೆ.

 

 

ಮಂಡ್ಯದಲ್ಲಿ ಉತ್ತಮ ಮಳೆ

ಇನ್ನು ಮಂಡ್ಯ ಜಿಲ್ಲೆಯಲ್ಲಿ ಕೂಡ ವರ್ಷದ ಮೊದಲ ಮಳೆ ಜನರಲ್ಲಿ ಸಂತಸ ತಂದಿದೆ. ಮಂಡ್ಯ ನಗರದಲ್ಲಿ ಗುರುವಾರ ಸಂಜೆ ಮಳೆ ಆರಂಭವಾಗಿದ್ದು, ರಾತ್ರಿ ವೇಳೆಗೆ ಉತ್ತಮ ಮಳೆಯಾಗುವ ಸಾಧ್ಯತೆ ಇದೆ. ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ಗನಲು, ನೆಲ್ಲಿಗೆರೆ ಸೇರಿದಂತೆ ಹಲವು ಕಡೆಗಳಲ್ಲಿ ಮಳೆಯಾಗಿರುವ ಬಗ್ಗೆ ವರದಿಯಾಗಿದೆ.

ಕನಕಪುರದ ಹಾರೋಹಳ್ಳಿಯಲ್ಲಿ ಕೂಡ ಸಾಧಾರಣ ಮಳೆಯಾಗಿದ್ದು, ಅಂತೂ ಇಂತೂ ಬೆಂಗಳೂರು ಸಮೀಪದಲ್ಲಿ ಮಳೆಯಾಗುತ್ತಿದೆ. ತುಮಕೂರು ಜಿಲ್ಲೆ ಕುಣಿಗಲ್ ತಾಲೂಕಿನ ಹುಲಿಯೂರುದುರ್ಗದಲ್ಲಿ ಮಳೆಯಾಗಿದೆ.

ಹಲವು ಜಿಲ್ಲೆಗಳಲ್ಲಿ ವ್ಯಾಪಕ ಮಳೆ

ಗುರುವಾರ ಧಾರವಾಡ ಜಿಲ್ಲೆಯಲ್ಲಿ ಆಲಿಕಲ್ಲು ಸಹಿತ ವ್ಯಾಪಕ ಮಳೆಯಾಗಿದೆ. ಧಾರವಾಡ ಮಾತ್ರವಲ್ಲದೆ ಹುಬ್ಬಳ್ಳಿ ನಗರದಲ್ಲಿ ಕೂಡ ಉತ್ತಮ ಮಳೆಯಾಗಿದೆ. ಸತತ ಎರಡನೇ ದಿನ ಧಾರವಾಡ ಜಿಲ್ಲೆಯಲ್ಲಿ ಮಳೆಯಾಗುತ್ತಿದ್ದು ಜನರ ಸಂತಸ ಹೆಚ್ಚಿಸಿದೆ.

ಬೆಳಗಾವಿ, ಹಾವೇರಿ, ದಾವಣಗೆರೆ, ಬಳ್ಳಾರಿ, ಗದಗ, ಚಾಮರಾಜನಗರ ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಉತ್ತಮ ಮಳೆಯ ವರದಿಯಾಗಿದೆ.


Spread the love

About Laxminews 24x7

Check Also

ಆರೋಪಿ ಫಯಾಜ್‌ ನ್ಯಾಯಾಂಗ ಬಂಧನಕ್ಕೆ!

Spread the loveಹುಬ್ಬಳ್ಳಿ : ಕಾಲೇಜು ಆವರಣದಲ್ಲಿ ವಿದ್ಯಾರ್ಥಿನಿಯ ಹತ್ಯೆ(student murder) ಆರೋಪಿ ಫಯಾಜ್‌(Fayaz) ಎಂಬುವವನನ್ನ ಕೋರ್ಟ್‌ ಇಂದು ನ್ಯಾಯಾಂಗ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ