Breaking News
Home / ರಾಜಕೀಯ / ಹರ್ಷಿಕಾ ಪೂಣಚ್ಚ ದಂಪತಿ ಮೇಲೆ ಅನ್ಯಕೋಮಿನ ಗುಂಪಿನಿಂದ ಹಲ್ಲೆ; ಸ್ಥಳದಲ್ಲಿದ್ದರು ಸಹಾಯಕ್ಕೆ ಬಾರದ ಪೊಲೀಸರು

ಹರ್ಷಿಕಾ ಪೂಣಚ್ಚ ದಂಪತಿ ಮೇಲೆ ಅನ್ಯಕೋಮಿನ ಗುಂಪಿನಿಂದ ಹಲ್ಲೆ; ಸ್ಥಳದಲ್ಲಿದ್ದರು ಸಹಾಯಕ್ಕೆ ಬಾರದ ಪೊಲೀಸರು

Spread the love

ಬೆಂಗಳೂರು: ಸ್ಯಾಂಡಲ್​ವುಡ್​ನ ಸ್ಟಾರ್​ ಕಪಲ್​ ಎಂದೇ ಖ್ಯಾತಿ ಪಡೆದಿರುವ ನಟಿ ಹರ್ಷಿಕಾ ಪೂಣಚ್ಚ ಹಾಗೂ ಆಕೆಯ ಪತಿ ಭುವನ್ ಪೊನ್ನಣ್ಣ ಮೇಲೆ ಅನ್ಯಕೋಮಿನ ಪುಂಡರ ಗುಂಪೊಂದು ಹಲ್ಲೆ ಮಾಡಿ ಅಟ್ಟಹಾಸ ಮೆರೆದಿರುವ ಘಟನೆ ನಡೆದಿದೆ. ಈ ಕುರಿತು ನಟಿ ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದು, ನಮ್ಮ ಬೆಂಗಳೂರಿನಲ್ಲಿ ನಾವು ಸ್ಥಳೀಯರು ಎಷ್ಟು ಸುರಕ್ಷಿತ ಎಂದು ಪ್ರಶ್ನಿಸಿದ್ದಾರೆ

ಗೆಳೆಯರೇ ,ನಮ್ಮ ಬೆಂಗಳೂರಿನಲ್ಲಿ ನಾವು ಸ್ಥಳೀಯರು ಎಷ್ಟು ಸುರಕ್ಷಿತ ಎಂಬ ಪ್ರಶ್ನೆ ನನಗೆ ಮೂಡಿದೆ. ಒಂದಷ್ಟು ಯೋಚಿಸಿ ಕೆಲವು ದಿನಗಳ ಹಿಂದೆ ನಮ್ಮ ಬೆಂಗಳೂರಿನಲ್ಲಿ ನನಗಾದ ಭಯಾನಕ ಅನುಭವವನ್ನು ಹಂಚಿಕೊಳ್ಳಲು ನಿರ್ಧರಿಸಿದ್ದೇನೆ. ನನ್ನ ಸ್ನೇಹಿತರು, ಕುಟುಂಬ ಮತ್ತು ಪೊಲೀಸ್ ಇಲಾಖೆಯಲ್ಲಿನ ಕೆಲವು ಪರಿಚಯಸ್ಥರೊಂದಿಗೆ ಮಾತನಾಡಿದ ನಂತರ ನಾನು ಈ ವಿಷಯವನ್ನು ಅಲ್ಲಿಗೇ ಬಿಟ್ಟು ಬಿಡುತ್ತೇನೆ ಎಂದು ಯೋಚಿಸಿದೆ ಆದರೆ ನನ್ನ ಅನುಭವದಿಂದ ಮತ್ತಿರರಿಗೆ ಸಹಾಯ ವಾಗ ಬಹುದು ಎಂದು ಯೋಚಿಸಿ ನಾನು ಅದರ ಬಗ್ಗೆ ಪೋಸ್ಟ್ ಮಾಡಲು ನಿರ್ಧರಿಸಿದೆ.

ಒಂದೆರಡು ದಿನಗಳ ಹಿಂದೆ ಫ್ರೇಜರ್ ಟೌನ್ ಪ್ರದೇಶದ ಸಮೀಪವಿರುವ ಪುಲಿಕೇಶಿ ನಗರದ ಮಸೀದಿ ರಸ್ತೆಯಲ್ಲಿರುವ ‘ಕರಾಮಾ’ ಎಂಬ ರೆಸ್ಟೊರೆಂಟ್‌ನಲ್ಲಿ ಸಂಜೆ ಕುಟುಂಬದೊಂದಿಗೆ ಊಟ ಮಾಡಲು ತೆರಳಿದ್ದೆ. ಭೋಜನವನ್ನು ಮುಗಿಸಿದ ನಂತರ ನಾವು ವಾಲೆಟ್ ಪಾರ್ಕಿಂಗ್‌ನಿಂದ ನಮ್ಮ ವಾಹನವನ್ನು ಸ್ವೀಕರಿಸಿ ಹೊರಡುತ್ತಿದ್ದಾಗ ಇಬ್ಬರು ವ್ಯಕ್ತಿಗಳು ಡ್ರೈವರ್ ಸೀಟ್ ಕಿಟಕಿಯ ಬಳಿ ಇದ್ದಕ್ಕಿದ್ದಂತೆ ಕಾಣಿಸಿಕೊಂಡು , ನಿಮ್ಮ ವಾಹನವು ತುಂಬಾ ದೊಡ್ಡದಾಗಿದೆ, ಇದ್ದಕ್ಕಿದ್ದಂತೆ ಚಲಿಸಿದಲ್ಲಿ ಅದು ನಮ್ಮನ್ನು ಮುಟ್ಟಬಹುದು ಎಂದು ವಾದಿಸಲು ಪ್ರಾರಂಭಿಸಿದರು. ನನ್ನ ಪತಿ ‘ಇನ್ನು ವಾಹನ ಮೂವ್ ಮಾಡಿಲ್ವಲ್ಲ ಸೈಡು ಬಿಡಿ’ ಎಂದು ಹೇಳಿದರು ಏಕೆಂದರೆ ಅವರು ಸಂಭವನೀಯ ಘಟನೆ ಬಗ್ಗೆ ಮಾತನಾಡುತ್ತಿದ್ದು ಅದರಲ್ಲಿ ಅರ್ಥವಿರಲಿಲ್ಲ.

 

 

 

ನಾವು ವಾಹನವನ್ನು ಸ್ವಲ್ಪ ಮುಂದಕ್ಕೆ ಸರಿಸಿದೆವು, ಅಷ್ಟರೊಳಗೆ ಈ ಇಬ್ಬರು ವ್ಯಕ್ತಿಗಳು ನಮ್ಮನ್ನು ಅವರ ಭಾಷೆಯಲ್ಲಿ ನಿಂದಿಸಲು ಪ್ರಾರಂಭಿಸಿದರು, ಈ ಲೋಕಲ್ ಕನ್ನಡಿಗರಿಗೆ ಪಾಠ ಕಲಿಸಬೇಕು ಎಂದು ಹೇಳಿ ನನ್ನ ಪತಿಯ ಮುಖದ ಮೇಲೆ ಹೊಡೆಯಲು ಸಹ ಪ್ರಯತ್ನಿಸಿದರು. ನನ್ನ ಪತಿ ತುಂಬಾ ತಾಳ್ಮೆಯಿಂದಿದ್ದರು ಮತ್ತು ಹೆಚ್ಚು ಪ್ರತಿಕ್ರಿಯಿಸಲಿಲ್ಲ. ನನಗೆ ಆಶ್ಚರ್ಯವಾಯಿತು ಏಕೆಂದರೆ ಅವರು ಸಾಮಾನ್ಯವಾಗಿ ತುಂಬಾ ಸಿಟ್ಟು ಸ್ವಭಾವದವರು. 2 – 3 ನಿಮಿಷಗಳಲ್ಲಿ ಅದೇ ಗ್ಯಾಂಗ್‌ನ 20 – 30 ಸದಸ್ಯರ ಗುಂಪು ಜಮಾಯಿಸಿತು ಮತ್ತು ಅವರಲ್ಲಿ 2 ಜನರು ನನ್ನ ಗಂಡನ ಚಿನ್ನದ ಸರವನ್ನು ಕಿತ್ತು, ಅದನ್ನು ಬಹಳ ಕೌಶಲ್ಯದಿಂದ ತಮ್ಮ ಕಡೆಗೆ ಎಳೆಯಲು ಪ್ರಯತ್ನಿಸಿದರು. ನನ್ನ ಪತಿ ಇದನ್ನು ಸಮಯಕ್ಕೆ ಸರಿಯಾಗಿ ಅರಿತುಕೊಂಡರು ಅದನ್ನು ಹಿಡಿದಿಟ್ಟುಕೊಂಡು ನನಗೆ ಕೊಟ್ಟರು.

ನಾವು ಸಮೀಪದಲ್ಲಿ ಗಸ್ತು ಪೊಲೀಸ್ ವಾಹನವನ್ನು ಕಂಡು ಘಟನೆಯನ್ನು ಹತ್ತಿರದ ಪೊಲೀಸ್ ಠಾಣೆಯ ASI ಉಮೇಶ್ ಅವರಿಗೆ ವಿವರಿಸಿದೆವು. ಅವರು ನಮಗೆ ಸಹಾಯ ಮಾಡಲು ಆಸಕ್ತಿ ತೋರಲಿಲ್ಲ. ಇಲಾಖೆಯ ಮೇಲಧಿಕಾರಿಗಳ ಜತೆ ಮಾತನಾಡಬೇಕು ಎಂದ ಅವರು, ಬಂದು ಏನಾಯಿತು ಎಂದು ತಿಳಿದುಕೊಳ್ಳುವ ಸೌಜನ್ಯವೂ ಇಲ್ಲ. ಕೇವಲ 2 ಕಟ್ಟಡಗಳ ಮುಂದಿರುವ ರೆಸ್ಟೊರೆಂಟ್‌ನ ಮುಂದೆ ಮೂಸಂಬಿ ಜ್ಯೂಸ್ ಕುಡಿಯುತ್ತ ಕಾರ್​ನಲ್ಲಿ ಅವರು ಕುಳಿತಿದ್ದರು.

ಅಷ್ಟೊತ್ತಿಗಾಗಲೇ ಇಡೀ ತಂಡವು ಚಿನ್ನದ ಸರ ಮತ್ತು ಇತರ ಬೆಲೆಬಾಳುವ ವಸ್ತುಗಳನ್ನು ಕೈಗೆ ಸಿಗದೆ ರೊಚ್ಚಿಗೆದ್ದು ವಾಹನಕ್ಕೆ ಹಾನಿ ಮಾಡಿ ನಮಗೆ ಅಥವಾ ಯಾರಿಗೂ ಅರ್ಥವಾಗದ ವಿಷಯಗಳನ್ನು ಹೇಳಿ ನಮ್ಮನ್ನು ದೈಹಿಕವಾಗಿ ನಿಂದಿಸಲು ಪ್ರಯತ್ನಿಸಿದರು. ನಮ್ಮ ವಾಹನದಲ್ಲಿ ಮಹಿಳೆಯರು ಮತ್ತು ಕುಟುಂಬದವರು ಇದ್ದ ಕಾರಣ ನನ್ನ ಪತಿ ಹೆಚ್ಚು ಪ್ರತಿಕ್ರಿಯಿಸಲಿಲ್ಲ. ಅಲ್ಲದೆ ನಾನು ಗಮನಿಸಿದ್ದು ಏನೆಂದರೆ ಇವರಿಗೆ ನಾವು ಕನ್ನಡದಲ್ಲಿ ಮಾತನಾಡುತ್ತಿದ್ದೇವೆ ಎಂಬುದು ಸಮಸ್ಯೆ ಆಗಿತ್ತು. ಅವರು ನೀವು ನಮ್ಮ ಪ್ರದೇಶಕ್ಕೆ ಬಂದು ನಿಮಗೆ ಬೇಕಾದ ಭಾಷೆಗಳಲ್ಲಿ ಮಾತನಾಡುವುದನ್ನು ನಿಲ್ಲಿಸಿ. ‘ಯೇ ಲೋಕಲ್ ಕನ್ನಡ್ ವಾಲಾ ಹೇ’ (ಈ ವ್ಯಕ್ತಿಗಳು ಸ್ಥಳೀಯ ಕನ್ನಡ ಜನರು) ನನ್ನ ಗಂಡ ಮತ್ತು ನಾನು ಕನ್ನಡದಲ್ಲಿ ಮಾತ್ರ ಮಾತನಾಡಿದಾಗ ಎಂದು ನಟಿ ಹರ್ಷಿಕಾ ಪೂಣಚ್ಚ ತಮಗಾದ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡು ವಿಡಿಯೋ ಪೋಸ್ಟ್​ ಮಾಡಿದ್ದಾರೆ.


Spread the love

About Laxminews 24x7

Check Also

ಸಿದ್ದರಾಮಯ್ಯನವರೇ ಅಧಿಕಾರದಿಂದ ಇಳೀರಿ, 24 ಗಂಟೆಯಲ್ಲಿ ಕಸ್ಟಡಿಗೆ ತೆಗೆದುಕೊಳ್ಳುತ್ತೇವೆ. : ಆರ್. ಅಶೋಕ್ ಸವಾಲು

Spread the loveಬೆಂಗಳೂರು : ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಪಕ್ಷ ನಾಯಕ ಆರ್ ಅಶೋಕ್ ಸಿಎಂ ಸಿದ್ದರಾಮಯ್ಯ ಹಾಗೂ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ